ʻನನ್ನ ಮೈತ್ರಿʼಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Published: 10th September 2023 01:36 PM | Last Updated: 10th September 2023 01:37 PM | A+A A-

ನನ್ನ ಮೈತ್ರಿ ಯೋಜನೆ ಭಿತ್ತಿಪತ್ರ
ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸ್ಯಾನಿಟರಿ ನ್ಯಾಪ್ಕಿನ್ ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಹಾಗೂ ದೀರ್ಘ ಬಾಳಿಕೆ ಬರುವ ಮೆನ್ ಸ್ಟ್ರುಯಲ್ ಕಪ್ ಗಳನ್ನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ. ಪ್ರಾಯೋಗಿಕವಾಗಿ ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಎರಡು ಜಿಲ್ಲೆಗಳಲ್ಲಿ ʻನನ್ನ ಮೈತ್ರಿʼಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಚಿವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ [ಸೆ.11] ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ.
1/2 pic.twitter.com/FlaV6FAcf8— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 10, 2023
ರಾಜ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾದ ದಕ್ಷಿಣಕನ್ನಡ ಜಿಲ್ಲೆಯಲ್ಲಿ 11,000 ವಿದ್ಯಾರ್ಥಿನಿಯರು ಹಾಗೂ ಚಾಮರಾಜ ನಗರದ 4,000 ವಿದ್ಯಾರ್ಥಿನಿಯರಿಗೆ ಕಪ್ ವಿತರಣೆಯಾಗಲಿದೆ. ಸರಕಾರಿ ಹಾಗೂ ಅನುದಾನಿತ ಕಾಲೇಜಿನಲ್ಲಿ ಕಲಿಯುತ್ತಿರುವ 17-18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಲಾ ಒಂದರಂತೆ ಒಟ್ಟು 15,000 ಕಪ್ ವಿತರಿಸಲಾಗುತ್ತದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.