'ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ': ಅಧಿಸೂಚನೆ ಪ್ರಕಟ

2023-24ನೇ ಸಾಲಿನ ಆಯವ್ಯಯ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 2023-24ನೇ ಸಾಲಿನ ಆಯವ್ಯಯ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. 

ಈ ಯೋಜನೆಗೆ ಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕರ ವಿಮಾ ಯೋಜನೆಯನ್ನು ರೂಪಿಸಲಾಗಿದ್ದು, ಸ್ವಿಗ್ಗಿ, ಜೊಮಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ ಕಾರ್ಟ್, ಬಿಗ್ ಬಾಸ್ಕೆಟ್ ನಂತಹ ಕಂಪನಿಗಳ ಉದ್ಯೋಗಿಗಳಿಗೆ 2 ಲಕ್ಷ ರೂ. ಜೀವ ವಿಮೆ ಹಾಗೂ 2 ಲಕ್ಷ ರೂ. ಅಪಘಾತ ವಿಮೆ ಸೇರಿದಂತೆ 4 ಲಕ್ಷ ರೂ. ವಿಮೆ ದೊರೆಯಲಿದೆ.

 ಎಲ್ಲಾ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ ಭಾಷಣದಲ್ಲಿ ತಿಳಿಸಿದ್ದರು.

ಗಿಗ್‌ ಕಾರ್ಮಿಕರು ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆಯಬೇಕಾಗುತ್ತದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 60 ವರ್ಷದ ಎಲ್ಲ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರು ಯೋಜನೆಗೆ ಒಳಪಡುತ್ತಾರೆ. ಆದಾಯ ತೆರಿಗೆ ಪಾವತಿದಾರರಾಗಿಬಾರದು. ಇಎಸ್‌ಐ ಮತ್ತು ಇಪಿಎಫ್‌ ಸೌಲಭ್ಯ ಹೊಂದಿರಬಾರದು.

ನೋಂದಣಿಗೆ ಅರ್ಜಿ ಸಲ್ಲಿಸುವ ವೇಳೆ ಉದ್ಯೋಗದಾತರಿಂದ ಪಡೆದ ಉದ್ಯೋಗ ಪ್ರಮಾಣ ಪತ್ರ/ಗುರುತಿನ ಚೀಟಿ, ಆಧಾರ ಸಂಖ್ಯೆ, ಇ-ಶ್ರಮ ಗುರುತಿನ ಚೀಟಿ ಸಂಖ್ಯೆ, ಪಾಸ್‌ ಪೋರ್ಚ್‌ ಅಳತೆಯ ಇತ್ತೀಚಿನ ಭಾವಚಿತ್ರ , ವಿಳಾಸ ಪುರಾವೆಗಾಗಿ ಯಾವುದಾದರೂ ದಾಖಲೆ (ಮತದಾರರ ಗುರುತಿನ ಚೀಟಿ, ಚಾಲನ ಪರವಾನಗಿ/ ಆಧಾರ್‌/ ಪಾಸ್‌ ಪೋರ್ಚ್‌/ ಬ್ಯಾಂಕ್‌ ಪಾಸ್‌ ಬುಕ್‌ ಇತ್ಯಾದಿ) ಸಲ್ಲಿಸಬೇಕು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com