ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್‌ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಸೂಚನೆ!

ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಈಗಾಗಲೇ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ 21 ಸಾವಿರ ಟಿಎಂಸಿಗೆ ಇಳಿದಿದೆ. ಆದರೆ ಕಾವೇರಿ ನೀರು ನಿಯಂತ್ರಣಾ ಸಮಿತಿ(ಸಿಡಬ್ಲ್ಯೂಆರ್‌ಸಿ) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ಸ್‌ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಇಂದು ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ನಡೆದಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಮಿತಿ ಸಭೆಯಲ್ಲಿ ತಮಿಳುನಾಡು ಹಾಗೂ ಕರ್ನಾಟಕದ ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿರುವುದು ಕರ್ನಾಟಕದಲ್ಲಿ ಅದರಲ್ಲೂ ಮಂಡ್ಯದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ವಪಕ್ಷ ನಿಯೋಗ ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com