ಬೀದರ್: ಮದ್ಯ ಕುಡಿಯಲು ಹಣ ಕೊಡದ ತಾಯಿ, ಕೊಡಲಿಯಿಂದ ಹೊಡೆದು ಕೊಂದ ಮದ್ಯವ್ಯಸನಿ ಮಗ!
ಬೀದರ್ ಜಿಲ್ಲೆಯಲ್ಲಿ 55 ವರ್ಷದ ಮಹಿಳೆಯನ್ನು ಆಕೆಯ ಮದ್ಯವ್ಯಸನಿ ಮಗನೇ ಕಡಿದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Published: 13th September 2023 11:22 AM | Last Updated: 13th September 2023 11:26 AM | A+A A-

ಸಾಂದರ್ಭಿಕ ಚಿತ್ರ
ಬೀದರ್: ಬೀದರ್ ಜಿಲ್ಲೆಯಲ್ಲಿ 55 ವರ್ಷದ ಮಹಿಳೆಯನ್ನು ಆಕೆಯ ಮದ್ಯವ್ಯಸನಿ ಮಗನೇ ಕಡಿದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬೀದರ್ ನಗರದ ಚೆಟ್ಟಿ ಗಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಶಕುಂತಲಾ ರಾಜಕುಮಾರ ಶಿಂಧೆ ಎಂದು ಗುರುತಿಸಲಾಗಿದೆ.
ಘಟನೆ ನಂತರ ಆರೋಪಿ ದೀಪಕ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಡುಕನಾಗಿದ್ದ ದೀಪಕ್, ಮದ್ಯ ಸೇವನೆಗೆ ಹಣ ನೀಡುವಂತೆ ಪ್ರತಿನಿತ್ಯ ತನ್ನ ತಾಯಿಯೊಂದಿಗೆ ಜಗಳ ಮಾಡುತ್ತಿದ್ದ. ಮಂಗಳವಾರ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ತಾಯಿ ನಿರಾಕರಿಸಿದ್ದು, ಇಬ್ಬರ ನಡುವೆ ಜಗಳವಾಗಿದೆ.
ಇದನ್ನೂ ಓದಿ: ಕೋಲಾರ: ಪತ್ನಿ ಕೊಂದು ಮಾವನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಬಂಧಿಸಲು ಹೋದ ಎಸ್ ಪಿ - ಸಿಬ್ಬಂದಿಗೆ ಗಾಯ!
ಈ ವೇಳೆ ಕೋಪದ ಭರದಲ್ಲಿ ವ್ಯಕ್ತಿ ತನ್ನ ತಾಯಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಸಂಬಂಧಿಕರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಹುಮನಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.