ಬೆಂಗಳೂರು: ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಯುವಕನ ಸಾವು, ಹತ್ಯೆ ಶಂಕೆ!
ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ.
Published: 16th September 2023 10:51 PM | Last Updated: 16th September 2023 10:51 PM | A+A A-

ಘಟನಾ ಸ್ಥಳದಲ್ಲಿ ಪರಿಶೀಲಿಸುತ್ತಿರುವ ಪೊಲೀಸರು
ಬೆಂಗಳೂರು: ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ರಫೀಕ್ ಅಹ್ಮದ್ ನನ್ನು ಚಾಕುವಿನಿಂದ ಇರಿದು ಕೊಂದಿರುವಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಗೆ ಗೊತ್ತಿದ್ದ ಆರೋಪಿಗಳಿಗೆ ಈ ಕೃತ್ಯವೆಸಗಿರುವ ಸಾಧ್ಯತೆ ಇದೆ ಎಂದು ವೈಟ್‌ಫೀಲ್ಡ್, ಡಿಸಿಪಿ ಡಾ ಸಂಜೀವ್ ಎಂ ಪಾಟೀಲ್ ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
Karnataka | A 28-year-old man namely Rafiq Ahmed died at a bus stop at Tin Factory in Bengaluru. It looks like he was stabbed to death, accused was known to him: Dr Sanjeev M Patil, DCP Whitefield, Bengaluru pic.twitter.com/8oaaJcm0Ip
— ANI (@ANI) September 16, 2023