ಬಿಬಿಎಂಪಿ ಅಗ್ನಿ ಅವಘಡ: ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿ ಸಲ್ಲಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿಯನ್ನು ಸಲ್ಲಿಸಲಾಗಿದೆ.
Published: 16th September 2023 12:17 PM | Last Updated: 16th September 2023 01:02 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿಯನ್ನು ಸಲ್ಲಿಸಲಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿಗೆ ಆಗಮಿಸಿದ ಅಧಿಕಾರಿಗಳು, ತಾಂತ್ರಿಕ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಶುಕ್ರವಾರ ಪಾಲಿಕೆ ಆಯುಕ್ತರಿಗೆ ಸಲ್ಲಿಸಿದರು.
ಇದನ್ನೂ ಓದಿ: ಬಿಬಿಎಂಪಿ ಅಗ್ನಿ ದುರಂತ: ಡಿ ಗ್ರೂಪ್ ಸಿಬ್ಬಂದಿ ಹರಕೆಯ ಕುರಿಯಾಗುವ ಸಾಧ್ಯತೆ?
ಬಿಬಿಎಂಪಿಯ ಇಂಜಿನಿಯರ್-ಇನ್-ಚೀಫ್ ಮತ್ತು ಘಟನೆಯ ಆಂತರಿಕ ತನಿಖೆಯ ಮುಖ್ಯಸ್ಥ ಬಿಎಸ್ ಪ್ರಹ್ಲಾದ್ ಅವರು ವರದಿ ಸಲ್ಲಿಕೆಯಾಗಿರುವುದನ್ನು ಖಚಿತಪಡಿಸಿದ್ದಾರೆ,
ಆರ್'ವಿ ಎಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ ಆಂಜನೇಯಪ್ಪ ಅವರು, ವರದಿಯನ್ನು ಸಿದ್ಧಪಡಿಸಿದ್ದು, ಈ ವರದಿಯನ್ನು ಬಿಬಿಎಂಪು ಮುಖ್ಯ ಆಯುಕ್ತರಿಗೆ ಸಲ್ಲಿಸಲಾಗಿದೆ. ವರದಿಯನ್ನು ಪರಿಶೀಲಿಸಿದ ನಂತರ ಮುಖ್ಯ ಆಯುಕ್ತರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.