ಚೈತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆ: ಪೊಲೀಸರು

ಚೈತ್ರಾ ಕುಂದಾಪುರ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ
Updated on

ಬೆಂಗಳೂರು: ಚೈತ್ರಾ ಕುಂದಾಪುರ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆಂದು ಪೊಲೀಸರು ಹೇಳಿದ್ದಾರೆ.

ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುದ ಅವರು ಸಿಸಿಬಿ ಪೊಲೀಸರು ವಶದಲ್ಲಿದ್ದಾರೆ. ನಿನ್ನೆಯಷ್ಟೇ ವಿಚಾರಣೆ ವೇಳೆ ಚೈತ್ರಾ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ನಂತರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚೈತ್ರಾ ಅಪಸ್ಮಾರ (ಮೂರ್ಛೆ ರೋಗ)ದಿಂದ ಬಳಲುತ್ತಿದ್ದು, ಆರೋಗ್ಯದಲ್ಲಿ ಏರುಪೇರು ಕಂಡುಬಂದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ 9.15ಕ್ಕೆ ಅರೆಪ್ರಜ್ಞಾವಸ್ಥೆಯಲ್ಲಿದ್ದ ರೋಗಿಯನ್ನು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಮತ್ತು ಎಮರ್ಜೆನ್ಸಿ ಕೇರ್ ಸೆಂಟರ್'ಗೆ ಕರೆತರಲಾಯಿತು. ರೋಗಿಗೆ ಈ ಮೊದಲೇ ಮೂರ್ಛೆ ರೋಗವಿತ್ತು. ಆದರೆ, ಔಷಧಿಗಳನ್ನು ಸೇವನೆ ಮಾಡುತ್ತಿರಲಿಲ್ಲ. ಇದೀಗ ಆಕೆಯ ಆರೋಗ್ಯ ಸ್ಥಿರವಾಗಿದೆ. ವಿಷ ಸೇವನೆ ಸಾಧ್ಯತೆಗಳು ಕಡಿಮೆಯಿದೆ. ಆರೋಗ್ಯ ಮೇಲ್ವಿಚಾರಣೆಗಾಗಿ ಐಸಿಯುವಿನಲ್ಲಿ ಇರಿಸಲಾಗಿದೆ ಎಂದು ಬಿಎಂಸಿಆರ್‌ಐ ಡೀನ್ ಮತ್ತು ನಿರ್ದೇಶಕ ಡಾ ರಮೇಶ್ ಕೃಷ್ಣ ಕೆ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com