ಮತ್ತೆ ತಮಿಳುನಾಡಿಗೆ ಕಾವೇರಿ ನೀರು: ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಕಾನೂನಾತ್ಮಕ ಹೋರಾಟ ನಡೆಸಬೇಕು: ಬೊಮ್ಮಾಯಿ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Published: 18th September 2023 08:05 PM | Last Updated: 19th September 2023 08:32 PM | A+A A-

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ 5,000 ಕ್ಯೂಸೆಕ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿ, ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಲು ಏಕೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದರು.
ಇದನ್ನೂ ಓದಿ: ಕಾವೇರಿ: ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಕರ್ನಾಟಕಕ್ಕೆ ಪ್ರಾಧಿಕಾರ ಆದೇಶ
ಸಿಡಬ್ಲ್ಯೂಎಂಎ ಆದೇಶ ಪಾಲನೆ ಕಷ್ಟಸಾಧ್ಯ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ, ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಜನರಿಗೆ ನ್ಯಾಯ ಒದಗಿಸಲು ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸಬೇಕು ಎಂದು ಅವರು ಹೇಳಿದರು.