ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಜಲಾಶಯಗಳಲ್ಲಿ ನೀರಿನ ಸಂಗ್ರಹವಿಲ್ಲ. ಹೀಗಾಗಿ ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಕಲಬುರಗಿ: ಜಲಾಶಯಗಳಲ್ಲಿ ನೀರಿನ ಸಂಗ್ರಹವಿಲ್ಲ. ಹೀಗಾಗಿ ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಆದೇಶಗಳನ್ನು ಕರ್ನಾಟಕ ಏಕೆ ಜಾರಿಗೊಳಿಸಲು ಸಾಧ್ಯವಾಗಲಿಲ್ಲ ಎಂಬುದಕ್ಕೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತಿದ್ದೇವೆ. ತಮಿಳುನಾಡಿಗೆ ನೀರು ಬಿಡಬೇಕಾದರೆ ಕರ್ನಾಟಕಕ್ಕೆ ಕಾವೇರಿ ನದಿಯಲ್ಲಿ 106 ಟಿಎಂಸಿ ಅಡಿ ನೀರು ಬೇಕು. ಕರ್ನಾಟಕಕ್ಕೆ ಕುಡಿಯುವ ನೀರಿನ ಉದ್ದೇಶಕ್ಕಾಗಿ 30 ಟಿಎಂಸಿ, ಬೆಳೆದ ಬೆಳೆಗಳನ್ನು ಉಳಿಸಲು 70 ಟಿಎಂಸಿ ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ನೀರಿನ ಅಗತ್ಯವಿದೆ. ಆದರೆ, ಇಂದಿನವರೆಗೆ ನಮ್ಮ ಬಳಿ 53 ಟಿಎಂಸಿ ಅಡಿಯಷ್ಟು ನೀರು ಮಾತ್ರ ಇದೆ ಎಂದು ಹೇಳಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಯಡಿಯೂರಪ್ಪ ಅವರದ್ದು ರಾಜಕೀಯ ಪ್ರೇರಿತ ಹೇಳಿಕೆ ಎಂದು ಕಿಡಿಕಾರಿದರು.
 
ಯಡಿಯೂರಪ್ಪ ಸೇರಿದಂತೆ ಹಿಂದಿನ ಎಲ್ಲ ಸರ್ಕಾರಗಳು ಅಧಿಕಾರದಲ್ಲಿದ್ದಾಗ ನೆರೆಯ ರಾಜ್ಯಕ್ಕೆ ನೀರು ಬಿಟ್ಟಿವೆ. ಸಾಮಾನ್ಯ ವರ್ಷದಲ್ಲಿ ಕರ್ನಾಟಕ 177.25 ಟಿಎಂಸಿ ಅಡಿ ನೀರು ಬಿಡುತ್ತಿತ್ತು. ಇಲ್ಲಿಯವರೆಗೆ 37.7 ಟಿಎಂಸಿ ಅಡಿ ಬಿಡುಗಡೆ ಮಾಡಿದ್ದೇವೆ. ತಮಿಳುನಾಡಿಗೆ 99 ಟಿಎಂಸಿ ಅಡಿ ಎಲ್ಲಿ ಬಿಡುಗಡೆ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಲಿ. ತಮಿಳುನಾಡಿಗೆ 500 ಕ್ಯೂಸೆಸ್ ನೀರು ಬಿಡುವಂತೆ ಸಿಡಬ್ಲ್ಯುಎಂಎ ಸೂಚಿಸಿದೆ. ಆದರೆ. ನಮ್ಮಲ್ಲಿ ನೀರಿನ ಸಂಗ್ರಹಣೆ ಇಲ್ಲದ ಕಾರಣ ನಾವು ನೀರನ್ನು ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com