ರಾಜ್ಯ ಸರ್ಕಾರದ ನಡೆ ರೈತರನ್ನು ಇಕ್ಕಟಿಗೆ ಸಿಲುಕಿಸಿದೆ: ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದ್ದು, ಸರ್ಕಾರದ ಈ ನಡೆ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.
ಕಾವೇರಿ ವಿವಾದ ಸಂಬಂಧ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಿಡಬ್ಲ್ಯೂಎಂಎ ಆದೇಶ ವಿಚಾರ ಸಂಬಂಧ ದೆಹಲಿಗೆ ಸಂಸದರ ನಿಯೋಗ ತೆರಳಲು ಏನೂ ಸಮಸ್ಯೆ ಇಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರ ಈ ಬಗ್ಗೆ ಆಸಕ್ತಿವಹಿಸಬೇಕು. ನನ್ನ ಸಲಹೆ ಇಕ್ಕಟಿಗೆ ಸಿಲುಕಿಸಿದೆ ಎಂದು ಡಿಕೆಶಿ ಹೇಳಿದ್ದಾರೆ. ರಾಜ್ಯ ಸರ್ಕಾರದ ನಡೆ ರೈತರನ್ನು ಇಕ್ಕಟಿಗೆ ಸಿಲುಕಿಸಿದೆ. ಸರ್ಕಾರ ತಾನು ಸಲ್ಲಿಸಿರುವ ಅಫಿಡವಿಟ್ಗೆ ಬದ್ಧರಾಗಿರಬೇಕಲ್ಲವೇ? ಸರ್ಕಾರದಲ್ಲಿ ಕೆಲಸ ಮಾಡುವವರಿಗೆ ಮಾಹಿತಿ, ಜವಾಬ್ದಾರಿ ಇರಬೇಕು.
ಡಿಸಿಎಂ ಡಿಕೆಶಿ ಏನೋ ಮಾತನಾಡಬೇಕು ಅಂತಷ್ಟೇ ಹೇಳಿಕೆ ನೀಡುತ್ತಾರೆ. ತಮಿಳುನಾಡಿನಂತೆ ವಸ್ತುಸ್ಥಿತಿ ಹೇಳಲು ನಾವು ಯಾವಾಗ ಕಲಿಯುತ್ತೇವೋ, ತಮಿಳುನಾಡಿನ ಡ್ಯಾಮ್ಗಳ ಬಗ್ಗೆ ನಮ್ಮ ವಕೀಲರು ಮಾತನಾಡುವುದಿಲ್ಲವೇ ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ