ರಾಜ್ಯ

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನು ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ!

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನು ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ!
ಸಾಂದರ್ಭಿಕ ಚಿತ್ರ
Published On :

ಚಾಮರಾಜನಗರ: ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನು ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಈ ಸಂಬಂಧ ಸಂತ್ರಸ್ತ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ ನಾಪತ್ತೆಯಾಗಿದ್ದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಅಬ್ದುಲ್ ಅಸೀಮ್ ಮತ್ತು ಆತನ ಸಹಚರ ಮಯೂರ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

ಅದ್ಬುಲ್ ಅಸೀಮ್ ಮತ್ತು ಸಂತ್ರಸ್ತೆ ಏಳು ವರ್ಷಗಳಿಂದ ಪರಿಚಿತರಾಗಿದ್ದರು. ಎರಡು ವರ್ಷಗಳ ಹಿಂದೆ ಮಹಿಳೆ ಬೇರೊಬ್ಬರನ್ನು ಮದುವೆಯಾಗಿದ್ದರು. ಹೀಗಾಗಿ, ಪತಿಯನ್ನು ಬಿಟ್ಟು ತನ್ನೊಂದಿಗೆ ಬರುವಂತೆ ಆರೋಪಿ ಸಂತ್ರಸ್ತೆ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ.

ಪತಿಯನ್ನು ಬಿಟ್ಟು ಬಾರದಿದ್ದರೆ ಆಕೆಯ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಅಬ್ದುಲ್ ಅಸೀಮ್ ತನ್ನ ಸಹಚರ ಮಯೂರ್ ಜೊತೆಗೆ ಆಕೆಯ ಖಾಸಗಿ ವಿಡಿಯೋಗಳನ್ನು ಮಹಿಳೆಯ ಪತಿ ಮತ್ತು ಕುಟುಂಬ ಸದಸ್ಯರಿಗೆ ಕಳುಹಿಸಿದ್ದ.

ಗಂಡನನ್ನು ಬಿಟ್ಟು ಬಾರದಿದ್ದರೆ ಹಿಂದೂ-ಮುಸ್ಲಿಂ ಸಂಘರ್ಷಕ್ಕೂ ನಾಂದಿ ಹಾಡುವುದಾಗಿ ಬೆದರಿಕೆ ಹಾಕಿದ್ದ. ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಬಾರದು ಎಂದಾದರೆ 10 ಲಕ್ಷ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದನು. ಹಣ ನೀಡದಿದ್ದಲ್ಲಿ ಆಕೆಯ ಖಾಸಗಿ ವಿಡಿಯೋದ ದೃಶ್ಯಗಳ ಬ್ಯಾನರ್‌ಗಳನ್ನು ಆ ಪ್ರದೇಶದಲ್ಲಿ ಹಾಕುವುದಾಗಿ ಆರೋಪಿ ಬೆದರಿಕೆಯೊಡ್ಡಿದ್ದ. 

ಈ ಸಂಬಂಧ ಸಂತ್ರಸ್ತೆ ಸೈಬರ್ ಎಕನಾಮಿಕ್ ಅಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಗೆ (ಸಿಇಎನ್) ದೂರು ನೀಡಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.