ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಎಫ್‌ಐಆರ್: ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಕೇಸ್
ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
Published: 19th September 2023 10:53 AM | Last Updated: 19th September 2023 08:36 PM | A+A A-

ಚೈತ್ರಾ ಕುಂದಾಪುರ
ಉಡುಪಿ: ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ಬಟ್ಟೆ ಅಂಗಡಿ ತೆರೆಯುವ ಹೆಸರಿನಲ್ಲಿ 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ನೀಡಿದ ದೂರಿನ ಮೇರೆಗೆ ಚೈತ್ರಾ ಕುಂದಾಪುರ ವಿರುದ್ಧ ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬ್ರಹ್ಮಾವರದ ಸುಧೀನಾ ಎಂಬುವವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಹಿಂದು ಧ್ವಜ, ಕೇಸರಿ ಬಂಟಿಂಗ್ಸ್ ಉದ್ಯಮ ಆರಂಭಿಸುವುದಾಗಿ ಸುಮಾರು 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಂಗಳವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧೀನಾ, 2015ರಲ್ಲಿ ನಡೆದ ಗೋ ರಕ್ಷಣಾ ಸಮಾವೇಶದ ವೇಳೆ ಚೈತ್ರಾ ಅವರ ಪರಿಚಯವಾಯಿತು. ಬಟ್ಟೆ ಅಂಗಡಿಯನ್ನು ತೆರೆಯಲು ಮೀನುಗಾರಿಕೆ ಮತ್ತು ಇತರ ಮೂಲಗಳಿಂದ ಹಣವನ್ನು ಸಂಗ್ರಹಿಸಿದ ಆತ ಚೈತ್ರಾ ಅವರಿಗೆ 2 ಲಕ್ಷ ರೂಪಾಯಿ ನಗದು ನೀಡಿದ್ದರು. ಇನ್ನೂ 3 ಲಕ್ಷ ರೂಪಾಯಿಯನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು.
ನಂತರ ಆಂಧ್ರಪ್ರದೇಶದಲ್ಲಿ ಕೆಲಸದ ನಿಮಿತ್ತ ತೆರಳಿದ್ದ ಸಂದರ್ಭದಲ್ಲಿ ಆಕೆಯ ಹೆಸರಿನಲ್ಲಿ ಬಟ್ಟೆ ಅಂಗಡಿ ತೆರೆಯಲಾಗಿತ್ತು ಎಂದು ದೂರುದಾರರು ತಿಳಿಸಿದ್ದಾರೆ. ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ, ತನ್ನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ಸುಧೀನಾ ಆರೋಪಿಸಿದ್ದಾರೆ.
ಇದನ್ನೂ ಓದಿ: ಟಿಕೆಟ್ ವಂಚನೆ ಪ್ರಕರಣ: ಹಿಂದುತ್ವವಾದಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಬಿಡುಗಡೆ, ವಿಚಾರಣೆ ಆರಂಭ
ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಬಂಧನವಾಗಿದ್ದ ಚೈತ್ರಾಗೆ ಬಾಯಿಯಲ್ಲಿ ನೊರೆ ಕಾಣಿಸಿಕೊಂಡು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ಚಿಕಿತ್ಸೆ ನಂತರ ಅವರು ಸೋಮವಾರ ಡಿಸ್ಚಾರ್ಜ್ ಆಗಿದ್ದು, ಸದ್ಯ ಅವರನ್ನು ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಸ್ಥಳಾಂತರಿಸಲಾಗಿದೆ.