ಟಿಕೆಟ್ ವಂಚನೆ ಪ್ರಕರಣ: ಹಿಂದುತ್ವವಾದಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಬಿಡುಗಡೆ, ವಿಚಾರಣೆ ಆರಂಭ
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕಿತ್ಸೆ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
Published: 19th September 2023 08:21 AM | Last Updated: 19th September 2023 08:22 AM | A+A A-

ಚೈತ್ರಾ ಕುಂದಾಪುರ
ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕಿತ್ಸೆ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಚೈತ್ರಾ ಹಠಾತ್ ಅಸ್ವಸ್ಥರಾಗಿದ್ದರು ಮತ್ತು ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತು. ಶುಕ್ರವಾರ ವಿಚಾರಣೆಗೆಂದು ಆಕೆಯನ್ನು ಸಿಸಿಬಿ ಕಚೇರಿಗೆ ಕರೆದೊಯ್ದಾಗ, ಅಲ್ಲಿ ಅವರು ಕುಸಿದು ಬಿದ್ದಿದ್ದರು. ಅವಳು ಫಿಟ್ಸ್ (ಮೂರ್ಛೆ) ರೋಗದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
ಆಕೆಯ ಎಲ್ಲಾ ವೈದ್ಯಕೀಯ ಪರೀಕ್ಷೆಗಳು ಮುಗಿದಿದ್ದು, ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದರಿಂದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಇದನ್ನೂ ಓದಿ: ಚೈತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆ: ಪೊಲೀಸರು
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ಹಣ ವಂಚಿಸಿರುವ ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.