
ಸಾಂದರ್ಭಿಕ ಚಿತ್ರ
ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.
ವಿಜಯಲಕ್ಷ್ಮಿ (17) ವರ್ಷ ಮೃತ ಬಾಲಕಿ. ಬೆಂಗಳೂರಿನ ಬ್ಯಾಟರಾಯನಪುರ ನಿವಾಸಿಯಾಗಿದ್ದಾಳೆ. ಇಲ್ಲಿನ ಬ್ರೈಡ್ ಅಪಾರ್ಟ್ಮೆಂಟ್ನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಖಿನ್ನತೆಗೊಳಗಾಗಿದ್ದ ಯುವತಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರೊಬ್ಬರು ರಕ್ಷಣೆ ಮಾಡಿ ಪೋಷಕರಿಗೆ ಪೋನ್ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ದರು. ಪುತ್ರಿ ಕಾಣೆಯಾಗಿದ್ದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ಕೂಡಾ ದಾಖಲಾಗಿತ್ತು.
ಇದನ್ನೂ ಓದಿ: ಪೊರಕೆಯಿಂದ ಹೊಡೆದು ಮಹಿಳೆಯಿಂದ ಜಾತಿ ನಿಂದನೆ; ನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು
ಧರ್ಮಸ್ಥಳ ದಿಂದ ಬೆಂಗಳೂರಿಗೆ ವಾಪಸ್ ಬಂದ ಬಾಲಕಿ ತಾನು ಪ್ರಾಣ ಕಳೆದುಕೊಳ್ಳುವ ನಿರ್ಧಾರದಿಂದ ಮಾತ್ರ ಹೊರಗೆ ಬಂದಿರಲಿಲ್ಲ. ಅಪಾರ್ಟ್ಮೆಂಟ್ನ ಟೆರೆಸ್ ಮೇಲಿಂದ ಬಿದ್ದು ಆತ್ಮಹತ್ಯೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.