
ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ಪ್ರತಿಭಟನೆ ತೀವ್ರಗೊಂಡಿದ್ದು, ಬೆಂಗಳೂರಿನಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ ತಮಿಳುನಾಡಿನ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಡಿಸಿಪಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚು ಅಲರ್ಟ್ ಆಗಿರುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: ಕಾವೇರಿ ವಿವಾದ: ಕರ್ನಾಟಕ ಬಂದ್ ಗೆ ಚಿಂತನೆ; ತಮಿಳರನ್ನು ವಾಪಸ್ ಕರೆಸಿಕೊಳ್ಳಿ- ವಾಟಾಳ್ ನಾಗರಾಜ್ ಆಗ್ರಹ
ಎಲ್ಲಾ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ಪಿಟಿಐ ಗೆ ಮಾಹಿತಿ ನೀಡಿದ್ದಾರೆ.ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಪ್ಪಳ, ವಿಜಯಪುರಗಳಲ್ಲಿ ಪ್ರತಿಭಟನೆ ನಡೆದಿದೆ.