ಬೆಂಗಳೂರಿನ ವಿವಿಧೆಡೆ ನಾಳೆ 'ಕಾವೇರಿ ನೀರು' ಪೂರೈಕೆಯಲ್ಲಿ ವ್ಯತ್ಯಯ

ತಾತಗುಣಿ 220 ಕೆ.ವಿ. ವಿದ್ಯುತ್‌ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ನಗರದಲ್ಲಿ ಶನಿವಾರ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಕಂಡು ಬರಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತಾತಗುಣಿ 220 ಕೆ.ವಿ. ವಿದ್ಯುತ್‌ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ನಗರದಲ್ಲಿ ಶನಿವಾರ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಕಂಡು ಬರಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ.

ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಇಡೀ ನಗರಕ್ಕೆ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗದ ಕಾರಣ ಹಿಂದಿನವಾದ ಇಂದು ಶುಕ್ರವಾರ ನೀರು ಸಂಗ್ರಹಿಸಿಟ್ಟುಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದೆ.

ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಕಾರಣಕ್ಕೆ ಸೆಪ್ಟಂಬರ್ 23ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 2 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಈ ಸಮಯದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಬೆಂಗಳೂರಿನ ನಾಗರಿಕರು/ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವ ಜೊತೆಗೆ ಅಗತ್ಯ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com