ಬೆಂಗಳೂರು ವಿಮಾನ ನಿಲ್ದಾಣದಲ್ಲಿ 30 ಐಫೋನ್‌, 28 ಲ್ಯಾಪ್‌ಟಾಪ್‌ ವಶಕ್ಕೆ

ಅಬುಧಾಬಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್‌, 28 ಲ್ಯಾಪ್‌ಟಾಪ್‌ಗಳು ಮತ್ತು ಕ್ರೆಡಿಟ್ ಕಾರ್ಡ್‌ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದಿರುವ ಐಫೋನ್ ಹಾಗೂ ಲ್ಯಾಪ್ ಟಾಪ್ ಗಳು.
ವಶಕ್ಕೆ ಪಡೆದಿರುವ ಐಫೋನ್ ಹಾಗೂ ಲ್ಯಾಪ್ ಟಾಪ್ ಗಳು.
Updated on

ಬೆಂಗಳೂರು: ಅಬುಧಾಬಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್‌, 28 ಲ್ಯಾಪ್‌ಟಾಪ್‌ಗಳು ಮತ್ತು ಕ್ರೆಡಿಟ್ ಕಾರ್ಡ್‌ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಸೆಪ್ಟೆಂಬರ್ 17ರಂದು ಇವುಗಳನ್ನು ವಶಪಡಿಸಿಕೊಳ್ಳಲಾಗಿದ್ದು. ಪ್ರಯಾಣಿಕನ ವಿರುದ್ಧ ಕಸ್ಟಮ್ಸ್ ಆಕ್ಟ್, 1962 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪ್ರಯಾಣಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಬ್ಯಾಗೇಜ್ ಬೆಲ್ಟ್‌ನಿಂದ ಲಗೇಜ್ ನ್ನು ತಡೆದಿದ್ದಾರೆ. ಈ ವೇಳೆ ತಪಾಸಣೆ ನಡೆಸಲಾಗಿದ್ದು, ಚಿನ್ನಾಭರಣ, ಲ್ಯಾಪ್ ಟಾಪ್ ಹಾಗೂ ಐಫೋನ್ ಗಳು ಪತ್ತೆಯಾಗಿದೆ. ಚೆಕ್ ಇನ್ ಬ್ಯಾಗೇಜ್ ಹಾಗೂ ಹ್ಯಾಂಡ್ ಬ್ಯಾಗೇಜ್ ನಲ್ಲಿ ಈ ವಸ್ತುಗಳು ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com