ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನ!
ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
Published: 23rd September 2023 06:30 PM | Last Updated: 23rd September 2023 08:15 PM | A+A A-

ಚೈತ್ರಾ ಕುಂದಾಪುರ-ಹಾಲಾಶ್ರೀ ಸ್ವಾಮೀಜಿ
ಬೆಂಗಳೂರು: ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಇಂದು ಆರೋಪಿಗಳು ಸಿಸಿಬಿ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಏಳು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅದರಂತೆ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದನ್ನೂ ಓದಿ: ಹಾಲಶ್ರೀ ಸ್ವಾಮಿಯ ಮತ್ತೊಂದು ದೋಖಾ; ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಪಿಡಿಒಗೆ ಕೋಟಿ ರು. ವಂಚನೆ
ಇನ್ನು ಪ್ರಕರಣ ಸಂಬಂಧ ಜಾಮೀನು ಕೋರಿ ರಮೇಶ್, ಚನ್ನನಾಯ್ಕ್, ಧನರಾಜ್ ಸಲ್ಲಿಸಿದ್ದು ಅರ್ಜಿ ವಿಚಾರಣೆ ನಡೆಸಿದ 3ನೇ ಎಸಿಎಂಎಂ ಕೋರ್ಟ್, ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಸೂಚನೆ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.