ಬೆಂಗಳೂರು: ವೇಗವಾಗಿ ಬಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು; ಸವಾರ ಸ್ಥಳದಲ್ಲೇ ಸಾವು
ವೇಗವಾಗಿ ಬಂದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕರಿಯಾನ ಪಾಳ್ಯ ಪ್ರದೇಶದ ಬಳಿ ನಡೆದಿದೆ.
Published: 23rd September 2023 05:08 PM | Last Updated: 23rd September 2023 05:08 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ವೇಗವಾಗಿ ಬಂದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕರಿಯಾನ ಪಾಳ್ಯ ಪ್ರದೇಶದ ಬಳಿ ನಡೆದಿದೆ.
ಮೃತರನ್ನು ಅಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಬೆಳಗ್ಗೆ 7:30ರ ಸುಮಾರಿಗೆ ಚಿಕ್ಕೇಗೌಡನ ಪಾಳ್ಯ ಕಡೆಯಿಂದ ಉತ್ತರಹಳ್ಳಿ ರಸ್ತೆ ಕಡೆಗೆ ವೇಗವಾಗಿ ಬಂದ ಕಾರು ಟೆಕ್ನಾಲಜಿ ರಸ್ತೆಯಲ್ಲಿ ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದಿದೆ ಎಂದು ಪಶ್ಚಿಮ ಬೆಂಗಳೂರು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಕಾರು ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಚಾಲನೆ ಮಾಡುತ್ತಿದ್ದ. ಆದ್ದರಿಂದ ಮುಂದೆ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 30 ಐಫೋನ್, 28 ಲ್ಯಾಪ್‌ಟಾಪ್ ವಶಕ್ಕೆ
ಸ್ಕೂಟರ್ ಸವಾರ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಮತ್ತು ಕಾರಿನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.