ಹಿಟ್ ಆ್ಯಂಡ್ ರನ್ ಕೇಸ್: ಆಂಧ್ರಪ್ರದೇಶ ಮೂಲದ ವ್ಯಕ್ತಿಯ ದುರ್ಮರಣ
ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಆಂಧ್ರಪ್ರದೇಶ ಮೂಲಕ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
Published: 24th September 2023 12:36 PM | Last Updated: 24th September 2023 12:37 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಆಂಧ್ರಪ್ರದೇಶ ಮೂಲಕ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಅಜಯ್ ಕುಮಾರ್ (20) ಮೃತ ವ್ಯಕ್ತಿ. ನಗರದ ಬನ್ನೇರುಘಟ್ಟದಲ್ಲಿ ನೆಲೆಸಿದ್ದ ಅಜಯ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು, ಇವರ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ವೇಳೆ ಅಜಯ್ ಅವರಿಗೆ ಗಂಭೀರವಾಗಿ ಗಾಯವಾಗಿದ್ದು, ದಾರಿ ಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ತಪಾಸಣೆ ನಡೆಸಿ, ವಾಹನವು ಅಜಯ್ ಅವರ ತಂದೆಯ ಹೆಸರಿನಲ್ಲಿ ದಾಖಲಾಗಿರುವುದರಿಂದ, ಅಜಯ್ ಅವರ ತಂದೆಯನ್ನು ಸಂಪರ್ಕಿಸಿದ್ದಾರೆ. ವಿಚಾರ ತಿಳಿದ ಅಜಯ್ ಅವರ ತಂಡೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಕೆಂಗೇರಿ ಪೊಲೀಸರು ಐಪಿಸಿ ಸೆಕ್ಷನ್ 304ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಮತ್ತು 279 (ಅತಿ ವೇಗದ ಚಾಲನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.