
ಸಂಗ್ರಹ ಚಿತ್ರ
ಚಿಕ್ಕಬಳ್ಳಾಪುರ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹುಲುಗಮ್ಮನಹಳ್ಳಿಯ 31 ವರ್ಷದ ವೆಂಕಟೇಶ್ ಹಾಗೂ ಚೇಳೂರು ತಾಲೂಕಿನ ಚಿಲಕಲನೇರ್ಪು ಗ್ರಾಮದ 36 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಹಿಟ್ ಆ್ಯಂಡ್ ರನ್ ಕೇಸ್: ಆಂಧ್ರಪ್ರದೇಶ ಮೂಲದ ವ್ಯಕ್ತಿಯ ದುರ್ಮರಣ
ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು ಮೃತದೇಹಗಳನ್ನು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.