ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA), ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಸೋಮವಾರ ಭಾರತೀಯ ಜನತಾ...
ಸಿ.ಎನ್. ಅಶ್ವತ್ಥ ನಾರಾಯಣ್
ಸಿ.ಎನ್. ಅಶ್ವತ್ಥ ನಾರಾಯಣ್

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA), ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಸೋಮವಾರ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಮಾಜಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಿಜೆಪಿ ಕಚೇರಿ ಹಾಗೂ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶಾರ್ಟ್ಸ್ ಧರಿಸಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಕಾವೇರಿ ವಿಚಾರದಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಜನತಾ ದಳ-ಜಾತ್ಯತೀತ(ಜೆಡಿಎಸ್) 'ರಾಜಕೀಯ' ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಪ್ರತಿಭಟನೆಗೆ ಅಡ್ಡಿಪಡಿಸಲು ಹೋಗುವುದಿಲ್ಲ. ಆದರೆ ಬಿಜೆಪಿ-ಜೆಡಿಎಸ್ ಪಕ್ಷಗಳು ಇದರಲ್ಲಿ ರಾಜಕೀಯ ಮಾಡುತ್ತಿವೆ. ಕಾವೇರಿ ವಿಚಾರವಾಗಿ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಇದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ವಿಚಾರವಾಗಿ ರಾಜೀನಾಮೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆದಾಗ ಯಾರಾದರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಹೇಳಿದ್ದಾರಾ? ಸರ್ವಪಕ್ಷ ಸಭೆಯಲ್ಲಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಯಾರೂ ಹೇಳಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com