ರಜತ ಮಹೋತ್ಸವದ ಸಂಭ್ರಮದಲ್ಲಿ ಬಿಎಂಟಿಸಿ: 'ನಮ್ಮ ಬಿಎಂಟಿಸಿ ಆ್ಯಪ್'ಗೆ ಇಂದು ಅಧಿಕೃತ ಚಾಲನೆ

25ನೇ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸೋಮವಾರ ನಮ್ಮ ಬಿಎಂಟಿಸಿ ಆ್ಯಪ್'ಗೆ ಇಂದು ಅಧಿಕೃತ ಚಾಲನೆ ನೀಡುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: 25ನೇ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸೋಮವಾರ ನಮ್ಮ ಬಿಎಂಟಿಸಿ ಆ್ಯಪ್'ಗೆ ಇಂದು ಅಧಿಕೃತ ಚಾಲನೆ ನೀಡುತ್ತಿದೆ.

ಈ ಅಪ್ಲಿಕೇಶನ್ ಜನರಿಗೆ ನೈಜ-ಸಮಯದ ಆಧಾರದ ಮೇಲೆ ಬಸ್‌ಗಳನ್ನು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ ಮತ್ತು ಬಸ್ ಮಾರ್ಗಗಳು ಮತ್ತು ಬಸ್ ನಿಲ್ದಾಣಗಳ ಮಾಹಿತಿಯನ್ನು ಒದಗಿಸುತ್ತದೆ.

ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಮೊಬೈಲ್ ಅಪ್ಲಿಕೇಶನ್ ಸಾರ್ವಜನಿಕ ಬಳಕೆಗೆ ಲಭ್ಯವಿದ್ದು, ಆ್ಯಪ್'ನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಇಂದು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ.

ಕೆಎಸ್‌ಆರ್‌ಟಿಸಿಯಿಂದ ಪ್ರತ್ಯೇಕಗೊಂಡು ಬಿಎಂಟಿಸಿ ಉದಯವಾಗಿ 25 ವರ್ಷಗಳು ಕಳೆದಿವೆ. ಇದರ ಸ್ಮರಣಾರ್ಥಕವಾಗಿ ಸ್ಮರಣಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಬಸ್ ನಿಗಮದ ಮೂಲಗಳು ಮಾಹಿತಿ ನೀಡಿವೆ.

ಇದೇ ಸಂದರ್ಭದಲ್ಲಿ ಕೆಂಪೇಗೌಡ ಬಸ್ ಟರ್ಮಿನಲ್‌ನಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನೌಕರರಿಗೆ ಮೀಸಲಾಗಿರುವ ಕ್ಯಾಂಟೀನ್ ಅನ್ನು ಅನಾವರಣಗೊಳಿಸಲಾಗುವುದು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಜೀವ ಕಳೆದುಕೊಂಡ ನೌಕರರ ಕುಟುಂಬಗಳಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ಅಪಘಾತಗಳಿಲ್ಲದೆ ಬಸ್‌ಗಳನ್ನು ಚಲಾಯಿಸಿದ ಚಾಲಕರಿಗೆ ಬೆಳ್ಳಿ ಪದಕಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com