ನಾಳೆ ಬಂದ್ ಹಿನ್ನೆಲೆ ಕರ್ನಾಟಕ ರಾಜ್ಯ ಮುಕ್ತ ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ; ಕಾನೂನು ವಿವಿ ಪರೀಕ್ಷೆಗಳೂ ಮುಂದಕ್ಕೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ.
Published: 26th September 2023 12:26 AM | Last Updated: 26th September 2023 02:04 PM | A+A A-

ಪರೀಕ್ಷೆ (ಸಂಗ್ರಹ ಚಿತ್ರ)
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ.
ಸೆ.26, 28, 29 ರಂದು ನಡೆಯಬೇಕಿದ್ದ ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮುಂದೂಡಿದೆ. ಕುಲಸಚಿವ ಕೆಬಿ ಪ್ರವೀಣ್ ಪರೀಕ್ಷೆಗಳನ್ನು ಮುಂದೂಡಿರುವ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಸೆ.26, 28, 29 ರಂದು ಸೈಕಾಲಜಿ, ಹಿಂದಿ, ಎಂಎ ಪತ್ರಿಕೋದ್ಯಮ, ರಾಜಕೀಯ ಶಾಸ್ತ್ರ, ವಾಣಿಜ್ಯ ಶಾಸ್ತ್ರ ಪರೀಕ್ಷೆಗಳು ನಡೆಯಬೇಕಿತ್ತು.
ಇದನ್ನೂ ಓದಿ: ನಾಳಿನ ಬೆಂಗಳೂರು ಬಂದ್ ಯಶಸ್ಸಿಗೆ ಬಿಜೆಪಿ ಬೆಂಬಲ- ಯಡಿಯೂರಪ್ಪ
ಬೆಂಗಳೂರು ಬಂದ್ ಹಿನ್ನೆಲೆ ನಾಳೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಕೂಡ ಮುಂದೂಡಿಕೆಯಾಗಿವೆ. ನಾಳಿನ ಎಲ್ಲಾ ಪರೀಕ್ಷೆಗಳನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಉಳಿದ ಪರೀಕ್ಷೆಗಳು ಯಥಾ ರೀತಿ ನಡೆಯಲಿವೆ.