ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಂಕಷ್ಟ ಸೂತ್ರದಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಕಾವೇರಿ ನೀರಿನ ವಿಚಾರವಾಗಿ ಎಲ್ಲ ಸಂಘಟನೆಗಳು ಬಂದ್​​ಗೆ ಕರೆ ನೀಡಿವೆ. ನಿಮ್ಮ ಹೋರಾಟದ ಜೊತೆ ಸರ್ಕಾರ ಜೊತೆಗಿರುತ್ತದೆ. ನಿಮ್ಮ ಹೋರಾಟದ ವಿಚಾರ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇವೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಒತ್ತಾಯಿಸಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಎಲ್ಲ ಸಂಘಟನೆಗಳು ಬಂದ್​​ಗೆ ಕರೆ ನೀಡಿವೆ. ನಿಮ್ಮ ಹೋರಾಟದ ಜೊತೆ ಸರ್ಕಾರ ಜೊತೆಗಿರುತ್ತದೆ. ನಿಮ್ಮ ಹೋರಾಟದ ವಿಚಾರ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇವೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು. ಸಂಕಷ್ಟ ಸೂತ್ರದಡಿ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಕ್ರಮ ಕೈಗೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಒತ್ತಾಯಿಸಿದ್ದಾರೆ.

ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಕಾವೇರಿ ವ್ಯಾಪ್ತಿಯ ನಾಲ್ಕು ರಾಜ್ಯಗಳ ಸಿಎಂಗಳನ್ನು ಕರೆದು ಸಭೆ ಮಾಡಬೇಕು. ನಾವು ಕೂಡ ನಿಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ನಿಮ್ಮ ಮನವಿಗಳನ್ನು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಚರ್ಚೆ ಮಾಡುತ್ತೇವೆ ಎಂದರು.

ನೆಲ ಜಲ‌ ಭಾಷೆ ಗೆ ಅನ್ಯಾಯ ಆದಾಗ ಹೋರಾಟ ಮಾಡುತ್ತಾ ಬಂದಿದ್ದಾರೆ. ಸರ್ಕಾರ 5 ವಿಚಾರಗಳನ್ನು ಹೇಳಿದೆ. ಮೂರು ದಿನಗಳಲ್ಲಿ ಮುಖಂಡರ ಸಭೆಯನ್ನು ಸಿಎಂ ಕರೆಯುವುದಾಗಿ ಹೇಳಿದ್ದಾರೆ. ಪೊಲೀಸರು ಹಾಕಿರುವ ಕೇಸ್ಗಳನ್ನು ವಾಪಸ್ ತೆಗೆದುಕೊಳ್ಳುವ ವಿಚಾರ ಸೂಕ್ತ ಕ್ರಮ ಆಗುತ್ತದೆ ಎಂದರು.

ಮೇಕೆ ದಾಟು ಅಣೆಕಟ್ಟು ವಿಚಾರದಲ್ಲಿ ಕ್ರಮ ಆಗುತ್ತದೆ. ಮಳೆ ಇಲ್ಲದ ಸಂದರ್ಭದಲ್ಲಿ ಸಂಕಷ್ಟ ಸೂತ್ರಕ್ಕಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಂಕಷ್ಟ ಸೂತ್ರ ರಚನೆ ಆಗಲೇಬೇಕು. ನಿಮ್ಮ ಎಲ್ಲಾ ಮನವಿಯನ್ನ ಮುಖ್ಯಮಂತ್ರಿಗೆ ತಿಳಿಸುತ್ತೇವೆ ಎಂದರು.

ಚಳುವಳಿಗೆ ಬರುತ್ತಿದ್ದ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದ ವಿಚಾರವಾಗಿ ಮಾತನಾಡಿ, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಮಾತಾಡಿ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕುರುಬೂರು ಶಾಂತಕುಮಾರ್, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪ್ರತಿಭಟನೆಯನ್ನು ಹತ್ತಿಕ್ಕುವ ಯತ್ನ ನಡೆಸಿದೆ ಎಂದು ಆರೋಪಿಸಿದ್ದಾರೆ. 

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ. ಕಾನೂನು ಹೋರಾಟದಲ್ಲಿ ಹಿನ್ನಡೆ ಅನುಭವಿಸಿದೆ. ಈ ವೈಫಲ್ಯಗಳನ್ನು ಮರೆಮಾಚಿಕೊಳ್ಳಲು ಪ್ರತಿಭಟನೆಯನ್ನು ತಡೆಯಲು ನಾನಾ ರೀತಿಯ ಕಾರ್ಯತಂತ್ರಗಳನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

ಬಂದ್ ವಿಷಯದಲ್ಲಿ ಯಾವುದೇ ಗೊಂದಲಗಳಿಲ್ಲ. ಸೆ.23 ಕ್ಕೆ ನಾವು ಬಂದ್ ಘೋಷಿಸಿದ್ದೆವು. ಅದಕ್ಕೆ ನಮ್ಮ ವಿರೋಧ ಇಲ್ಲ ಎಂದು ವಾಟಾಳ್ ನಾಗರಾಜ್ ಮತ್ತು ಅವರ ಸಂಗಡಿಗರು ಸ್ಪಷ್ಟಪಡಿಸಿದ್ದರು. ಬೆಂಗಳೂರು ಬಂದ್‍ಗೆ ಬೆಂಬಲ ನೀಡುವ ಕುರಿತಂತೆ ಸೆ. 25 ರಂದು ನಡೆಯುವ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದೆವು. ನಾವೂ ಕೂಡ ಆ ಸಭೆಯಲ್ಲಿ ಭಾಗವಹಿಸಿ ಒಗ್ಗಟ್ಟಿನ ಹೋರಾಟಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದೆವು. ಅದರ ಹೊರತಾಗಿಯೂ ಬಂದ್‍ಗೆ ಬೆಂಬಲ ಇಲ್ಲ ಎಂದು ನಿನ್ನೆ ಘೋಷಣೆ ಮಾಡಿದ್ದಾರೆ. ಇದು ನಾಡಿನ ಹಿತಾಸಕ್ತಿಯ ದೃಷ್ಟಿಯಿಂದ ಸರಿಯಲ್ಲ ಎಂದರು.

ರಾಜ್ಯಸರ್ಕಾರ ಸಮಗ್ರತೆ ಚರ್ಚೆ ನಡೆಸುವ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ತಿರಸ್ಕರಿಸುವಂತಹ ನಿಲುವನ್ನು ವ್ಯಕ್ತಪಡಿಸಬೇಕು ಎಂದು ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಬೆಂಗಳೂರು ಬಂದ್ ವೇಳೆ ಮಾತನಾಡಿರುವ ಅವರು, ಕಾವೇರಿ ನದಿ ವಿವಾದದಲ್ಲಿ ತಮಿಳುನಾಡು ತನ್ನ ಪಾಲಿನ ಹಕ್ಕನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ನಮ್ಮ ರಾಜ್ಯಸರ್ಕಾರ ವೈಫಲ್ಯ ಅನುಭವಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದ ಹೊರಗೆ ವಿವಾದವನ್ನು ಇತ್ಯರ್ಥಗೊಳಿಸಲು ಮಧ್ಯಪ್ರವೇಶ ಮಾಡಬೇಕಿತ್ತು. ಆದರೆ ಪ್ರಧಾನಿ ಹಾಗೂ ಕೇಂದ್ರ ಸರ್ಕಾರ ಕಂಡೂ ಕಾಣದಂತೆ ಜಾರಿಗೊಳ್ಳುತ್ತಿದೆ ಎಂದು ಆರೋಪಿಸಿದರು.

ಕಾವೇರಿ ನದಿ ನೀರನ್ನು ಒಂದು ತಿಂಗಳಿನಿಂದಲೂ ತಮಿಳುನಾಡಿಗೆ ಹರಿಸಲಾಗುತ್ತಿದೆ. ಮಂಡ್ಯ ಭಾಗದ ಜನ ಇದನ್ನು ವಿರೋಧಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಬೆಂಗಳೂರಿಗೆ ಕುಡಿಯುವ ನೀರು ಇಲ್ಲವಾಗುತ್ತದೆ. ಇಂತಹ ಸಂಕಷ್ಟದಲ್ಲಿ ಪ್ರತಿಭಟನೆ ಬಿಟ್ಟು ಬೇರೆ ಮಾರ್ಗ ಏನಿದೆ ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com