ಗದಗ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುಖ್ಯ ಶಿಕ್ಷಕನ ಬಂಧನ

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗದಗ: ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಶಾಲಾ ಅವಧಿ ಮುಗಿದ ನಂತರ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಯನ್ನು ತನ್ನ ಕಚೇರಿಗೆ ಕರೆಸಿಕೊಳ್ಳುತ್ತಿದ್ದ. ಶನಿವಾರ ಸಹ ಮನೆಗೆ ತಡವಾಗಿ ಹೋಗುವಂತೆ ಹೇಳಿ ತನ್ನ ಆಫೀಸ್‌ಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದ. ಈ ವಿಷಯ ಮನೆಯವರಿಗೆ ಹೇಳಿದರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿನಿಗೆ ಬೆದರಿಕೆಯನ್ನು ಸಹ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಇದಾದ ಬಳಿಕ ಬಾಲಕಿ ಇನ್ಮುಂದೆ ಶಾಲೆಗೆ ಹೋಗುವುದಿಲ್ಲ ಎಂದು ಮನೆಯವರ ಬಳಿ ಅಳುತ್ತಾ ಹೇಳಿದ್ದಾಳೆ. ಈ ಬಗ್ಗೆ ಪೋಷಕರು ಯಾಕೆ, ಏನು ಎಂದು ವಿಚಾರಿಸಿದಾಗ ಮುಖ್ಯ ಶಿಕ್ಷಕನ ಕಾಮ ಪುರಾಣವನ್ನು ಬಾಲಕಿ ಬಿಚ್ಚಿಟ್ಟಿದ್ದಾಳೆ. 

ನಂತರ ಬಾಲಕಿಯ ಕುಟುಂಬಸ್ಥರು ಸಹಾಯವಾಣಿ ಮೂಲಕ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 

ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡ ನರಗುಂದ ಪೊಲೀಸ್ ಠಾಣೆಯ ಪೊಲೀಸರು, ಮುಖ್ಯ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com