ಕಲಬುರಗಿ: ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತ, ಇಬ್ಬರು ವಿದ್ಯಾರ್ಥಿಗಳ ದುರ್ಮರಣ
ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಗರದ ರಿಂಗ್ ರಸ್ತೆಯ ನಾಗನಹಳ್ಳಿ ನಡೆದಿದೆ.
Published: 26th September 2023 07:01 PM | Last Updated: 26th September 2023 07:02 PM | A+A A-

ಸಂಗ್ರಹ ಚಿತ್ರ
ಕಲಬುರಗಿ: ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಗರದ ರಿಂಗ್ ರಸ್ತೆಯ ನಾಗನಹಳ್ಳಿ ನಡೆದಿದೆ.
ಮೃತರನ್ನು ರೆಹಮತ್ ನಗರದ ನಿವಾಸಿ ಇರ್ಫಾನ್ ಹಾಗೂ ಅಂಬಿಕಾ ನಗರದ ಅಬ್ಬಾಸ್ ಅಲಿ ಎಂದು ಗುರುತಿಸಲಾಗಿದೆ. ಅಬ್ಬಾಸ್ ಅಲಿ ಸ್ನೇಹಿತ ಇರ್ಫಾನ್ ಜೊತೆ ಬೈಕ್ ನಲ್ಲಿ ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ತುಮಕೂರು: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಕಾರಿಗೆ ಲಾರಿ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು
ಅಪಘಾತದ ವೇಳೆ ಬೈಕ್ ಸವಾರರಿಬ್ಬರ ತಲೆಗೆ ಗಂಭೀರ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು.