ನಾಗಮಂಗಲ ಬಳಿ ಭೀಕರ ಅಪಘಾತ: ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ.
Published: 27th September 2023 10:31 AM | Last Updated: 27th September 2023 02:18 PM | A+A A-

ಬೆಳ್ಳೂರು ಕ್ರಾಸ್(ಆದಿಚುಂಚನಗಿರಿ): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ.
ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು.
ಬೆಂಗಳೂರು-ಮಂಗಳೂರು ಹೆದ್ದಾರಿಯ ನಾಗಮಂಗಲ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ. ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸನ್ನು ಆದಿಚುಂಚನಗಿರಿ ಮೆಡಿಕಲ್ ಆಸ್ಪತ್ರೆ ಎದುರು ಜನರನ್ನು ಇಳಿಸಲು ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ವೇಗವಾಗಿ ಹಿಂದಿನಿಂದ ಬಂದ ಕಾರು ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬೆಂಗಳೂರು ಮೂಲದವರಾಗಿದ್ದಾರೆ. ಬೆಳ್ಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.