ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಸೆ. 29ರಂದು ಮೈಸೂರು ರಸ್ತೆ - ಕೆಂಗೇರಿ ನಡುವೆ ರೈಲು ಸೇವೆ ಇರಲ್ಲ
ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ನಿರ್ಮಿಸಲಾದ ಮಾರ್ಗದ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 29 ರಂದು ಕೆಂಗೇರಿಯಿಂದ ಮೈಸೂರು ರಸ್ತೆ ವರೆಗೆ...
Published: 27th September 2023 08:38 PM | Last Updated: 27th September 2023 08:49 PM | A+A A-

ಮೆಟ್ರೋ ರೈಲು
ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ನಿರ್ಮಿಸಲಾದ ಮಾರ್ಗದ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 29 ರಂದು ಕೆಂಗೇರಿಯಿಂದ ಮೈಸೂರು ರಸ್ತೆ ವರೆಗೆ ರೈಲು ಸೇವೆ ಇರುವುದಿಲ್ಲ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು(ದಕ್ಷಿಣ ವೃತ್ತ) ನಡೆಸುವುದರಿಂದ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
No Metro services btwn Kengeri and Mysuru Rd Metro stations on Sept 29 (Friday) fully due to CMRS inspection of the Kengeri-Challaghatta line @NewIndianXpress @XpressBengaluru @KannadaPrabha @srivasrbmrccoi1 @Sathya_N_T @KARailway @maddyvoldy pic.twitter.com/XWLFgFQ1ar
— S. Lalitha (@Lolita_TNIE) September 27, 2023
ಮೆಟ್ರೋ ನೇರಳೆ ಮಾರ್ಗದ ಕೆಂಗೇರಿಯಿಂದ ಮೈಸೂರು ರಸ್ತೆ ಮಾರ್ಗದಲ್ಲಿ ಸೆ.29ರ ಶುಕ್ರವಾರ ದಿನಪೂರ್ತಿ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಆದರೆ ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮಾರ್ಗದಲ್ಲಿ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ ಎಂದು ಹೇಳಿದೆ.
ಇದನ್ನು ಓದಿ: ನಮ್ಮ ಮೆಟ್ರೋದಲ್ಲಿ ಟಿಕೆಟ್ ರಹಿತ ಪ್ರಯಾಣ, ಅಪಾಯಕಾರಿ ಸ್ಟಂಟ್: ವಿದೇಶಿ ಯೂಟ್ಯೂಬರ್ ವಿರುದ್ಧ ದೂರು
ಇನ್ನು ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಸದರಿ ಬದಲಾವಣೆಗಳನ್ನು ಗಮನಿಸಿ ಪ್ರಯಾಣಿಸುವಂತೆ ಬಿಎಂಆರ್ ಸಿಎಲ್ ಕೋರಿದೆ.