ನಗರದಲ್ಲಿ ಶಾಂತಿಯುತ ಬಂದ್; 3 ಬಿಜೆಪಿ ಶಾಸಕರು ಸೇರಿ 1000 ಕ್ಕೂ ಹೆಚ್ಚು ಜನರ ಬಂಧನ, ಬಿಡುಗಡೆ: ಪೊಲೀಸ್ ಕಮಿಷನರ್ ಬಿ ದಯಾನಂದ

ಕಾವೇರಿಗಾಗಿ ಮಂಗಳವಾರ ನಡೆದ ಬೆಂಗಳೂರು ಬಂದ್ ಬಹುತೇಕ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಬಂದ್ ವೇಳೆ 3 ಬಿಜೆಪಿ ಶಾಸಕರು ಸೇರಿದಂತೆ 1000 ಕ್ಕೂ ಹೆಚ್ಚು ಜನರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.
ಬೆಂಗಳೂರು ಬಂದ್ ವೇಳೆ ಪೊಲೀಸರ ಕರ್ತವ್ಯ
ಬೆಂಗಳೂರು ಬಂದ್ ವೇಳೆ ಪೊಲೀಸರ ಕರ್ತವ್ಯ

ಬೆಂಗಳೂರು: ಕಾವೇರಿಗಾಗಿ ಮಂಗಳವಾರ ನಡೆದ ಬೆಂಗಳೂರು ಬಂದ್ ಬಹುತೇಕ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಬಂದ್ ವೇಳೆ 3 ಬಿಜೆಪಿ ಶಾಸಕರು ಸೇರಿದಂತೆ 1000 ಕ್ಕೂ ಹೆಚ್ಚು ಜನರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.

ಬಂದ್ ನಿಮಿತ್ತ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, 'ಬೆಂಗಳೂರು ದಕ್ಷಿಣ ಪೊಲೀಸ್ ವಿಭಾಗದ ಕೆಲವು ಹೋಟೆಲ್‌ಗಳ ಮೇಲೆ ಕಲ್ಲು ತೂರಾಟದ ಕೆಲವು ವಿನಾಕಾರಣ ಘಟನೆಗಳನ್ನು ಹೊರತುಪಡಿಸಿ ಮಂಗಳವಾರದ ಬೆಂಗಳೂರು ಬಂದ್ ಶಾಂತಿಯುತವಾಗಿತ್ತು. ಬಿಜೆಪಿಯ ಒಬ್ಬ ಶಾಸಕ ಮತ್ತು ಇಬ್ಬರು ಎಂಎಲ್‌ಸಿಗಳು ಸೇರಿದಂತೆ 1,000 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ತಡೆಗಟ್ಟುವ ಕ್ರಮವಾಗಿ ಬಂಧಿಸಲಾಯಿತು ಮತ್ತು ನಂತರ ಬಿಡುಗಡೆ ಮಾಡಲಾಯಿತು ಎಂದು ಹೇಳಿದರು.

"ಬಂದ್ ಶಾಂತಿಯುತವಾಗಿತ್ತು. ಯಾವುದೇ ಕಡೆಯಿಂದ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ, ನಗರದಾದ್ಯಂತ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಕೆಲವು ಸ್ಥಳಗಳಲ್ಲಿ, ಪ್ರತಿಭಟನೆಗೆ ಯತ್ನಿಸಿದವರನ್ನು ತಡೆಗಟ್ಟುವ ಕ್ರಮವಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಯಿತು, ಕೆಲವು ಸಂಘಟನೆಗಳಿಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಯಿತು ಎಂದು ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಭಟನಾಕಾರರನ್ನುದ್ದೇಶಿಸಿ ಮನವಿ ಸ್ವೀಕರಿಸಿ ಮಾತನಾಡಿ, ವಾಹನಗಳ ಓಡಾಟ ಸಹಜವಾಗಿತ್ತು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ನಗರದ ಎಲ್ಲ ಕಡೆ ಬಿಎಂಟಿಸಿ ಬಸ್‌ಗಳು ಸಂಚರಿಸಿದವು. ಬಲವಂತದ ಬಂದ್‌ ಜಾರಿಯಾಗಲಿಲ್ಲ. ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಎಲ್ಲಾ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ.

ಸೋಮವಾರ ಪ್ರತಿಭಟನಾಕಾರರಿಗೆ ಅನುಮತಿ ನಿರಾಕರಿಸಿದ್ದ ಪೊಲೀಸ್ ಆಯುಕ್ತರ ಆದೇಶವನ್ನು ಧಿಕ್ಕರಿಸಿ ಮೆರವಣಿಗೆ ನಡೆಸಲು ಯತ್ನಿಸಿದ ಅವರನ್ನು ಟೌನ್ ಹಾಲ್ ಬಳಿ ಬಂಧಿಸಲಾಯಿತು. ಪ್ರತಿಭಟನೆ ನಡೆದ ಫ್ರೀಡಂ ಪಾರ್ಕ್‌ನಲ್ಲಿ ಒಬ್ಬ ಪ್ರತಿಭಟನಾಕಾರ ತಾನು ಧರಿಸಿದ್ದ ಶಾಲನ್ನು ನೇಣು ಹಾಕಿಕೊಳ್ಳಲು ಯತ್ನಿಸಿದ್ದಾನೆ. ಸ್ಥಳದಲ್ಲಿದ್ದ ಪೊಲೀಸರು ಆತನನನ್ನು ತಡೆದು ತೀವ್ರ ಹೆಜ್ಜೆ ಇಡದಂತೆ ತಡೆದರು. ಉಸಿರು ಬಿಗಿ ಹಿಡಿದಿದ್ದರಿಂದ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಕಲ್ಲು ತೂರಾಟ ನಡೆಸಿದಇಬ್ಬರನ್ನು ಜಯನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com