ಬೆಂಗಳೂರು ಬಂದ್ ವೇಳೆ ಗದ್ದಲ: ಹೋಟೆಲ್‌ನಲ್ಲಿ ಗಲಾಟೆ ಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ
ಬೆಂಗಳೂರು ಬಂದ್ ವೇಳೆ ಹೊಟೇಲ್‌ನಲ್ಲಿ ಗಲಾಟೆ ಉಂಟುಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಬುಧವಾರ ಬಂದ್ ಆಚರಿಸಲಾಯಿತು.
Published: 28th September 2023 10:51 AM | Last Updated: 28th September 2023 10:51 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಬೆಂಗಳೂರು ಬಂದ್ ವೇಳೆ ಹೊಟೇಲ್‌ನಲ್ಲಿ ಗಲಾಟೆ ಉಂಟುಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಬುಧವಾರ ಬಂದ್ ಆಚರಿಸಲಾಯಿತು.
ಬಂಧಿತರನ್ನು ಯೋಗೀಶ್ ಮತ್ತು ಸೋಮಶೇಖರ್ ಎಂದು ಗುರುತಿಸಲಾಗಿದೆ.
ಎಂಟು ಜನರ ಗುಂಪು ಹೋಟೆಲ್‌ಗೆ ನುಗ್ಗಿತು ಮತ್ತು ಹೋಟೆಲ್ ತೆರೆದಿದ್ದಕ್ಕಾಗಿ ಗಾಜು ಮತ್ತು ಪೀಠೋಪಕರಣಗಳನ್ನು ಒಡೆದಿದೆ. ಇದೇ ಗುಂಪು ಇತರ ನಾಲ್ಕು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆಸಿದ ಆರೋಪ ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಇತರ ಆರೋಪಿಗಳ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ. ಬಂಧಿತ ಆರೋಪಿಗಳು ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಎ. ರಾಮಮೂರ್ತಿ ಅವರ ಸಹಚರರು.
ಬಂದ್ ವೇಳೆ ಹೋಟೆಲ್ ಉಡುಪಿ ಹಬ್ ಅನ್ನು ತೆರೆದಿದ್ದಕ್ಕಾಗಿ ಗುಂಪು ಗಲಾಟೆ ಸೃಷ್ಟಿಸಿದೆ. ಈ ಸಂಬಂಧ ಪೊಲೀಸರು ಈ ಹಿಂದೆ ಇಬ್ಬರನ್ನು ಬಂಧಿಸಿದ್ದರು.
ಇದನ್ನೂ ಓದಿ: ನಗರದಲ್ಲಿ ಶಾಂತಿಯುತ ಬಂದ್; 3 ಬಿಜೆಪಿ ಶಾಸಕರು ಸೇರಿ 1000 ಕ್ಕೂ ಹೆಚ್ಚು ಜನರ ಬಂಧನ, ಬಿಡುಗಡೆ: ಪೊಲೀಸ್ ಕಮಿಷನರ್ ಬಿ ದಯಾನಂದ
ಬೆಂಗಳೂರು ಬಂದ್ ವೇಳೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಹೋಟೆಲ್ ಮಾಲೀಕರೇ ಹೊಣೆಯಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದರು.
ಬೆಂಗಳೂರು ಬಂದ್ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ 1,000 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿರುವುದಾಗಿ ಬೆಂಗಳೂರು ನಗರ ಪೊಲೀಸರು ತಿಳಿಸಿದ್ದಾರೆ.