ನಾಳೆ ಕರ್ನಾಟಕ ಬಂದ್: ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ!
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನಾಳೆ(ಶುಕ್ರವಾರ) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು ಈ ಬಂದ್ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದೆ.
Published: 28th September 2023 03:28 PM | Last Updated: 28th September 2023 03:28 PM | A+A A-

ಬೆಂಗಳೂರು ಪೊಲೀಸ್ ಆಯುಕ್ತ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನಾಳೆ(ಶುಕ್ರವಾರ) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು ಈ ಬಂದ್ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದೆ.
ಸಂಘಟನೆಗಳು ಬೃಹತ್ ಪ್ರತಿಭಟನೆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸುಪ್ರೀಂಕೋರ್ಟ್ ಗಮನಸೆಳೆಯುವ ಪಯತ್ನಕ್ಕೆ ಮುಂದಾಗಿವೆ. ಆದರೆ ಈ ಮಧ್ಯೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಅದರಂತೆ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಮೇಲೆ ಪರಿಣಾಮ ಸಾಧ್ಯತೆ; ಯಾವ ಸೇವೆ ಲಭ್ಯ, ಯಾವುದು ಅಲಭ್ಯ?
ಹಲವಾರು ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕೋರ್ಟ್ ಆದೇಶದ ಪ್ರಕಾರ ಬಂದ್ ಗೆ ಅವಕಾಶ. ಹೀಗಾಗಿ ನಾಳೆಯೂ ಸಹ ಪ್ರತಿಭಟನೆ ರ್ಯಾಲಿ ಮತ್ತು ಮೆರವಣಿಗೆಗೆ ಅವಕಾಶ ಇಲ್ಲ. ಹೀಗಾಗಿ ಮೆರವಣಿಗೆ ಮಾಡುವುದು ಸಾರ್ವಜನಿಕ ಸಭೆ ನಿಷೇಧವಿದೆ ಎಂದು ನಗರ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದರು.
ಬಲವಂತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುವಂತಿಲ್ಲ, ಸಾರ್ವಜನಿಕ ಜೀವನಕ್ಕೆ ಸಮಸ್ಯೆ ಉಂಟು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಸಹ ಇದೆ. ಬಂದ್ ವೇಳೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾದರೆ ಇದಕ್ಕೆ ಸಂಘಟನೆಗಾರರೇ ಹೊಣೆಗಾರರಾಗುತ್ತೀರಾ. ಸಾರ್ವಜನಿಕರು ತಾವಾಗಿಯೇ ಬಂದ್ ಮಾಡಿದರೆ ಸಮಸ್ಯೆ ಇಲ್ಲ. ಅದನ್ನು ಬಿಟ್ಟು ಬಲವಂತವಾಗಿ ಬಂದ್ ಮಾಡಿಸಿದರೆ ಕಾನೂನಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆಯುಕ್ತರು ಖಡಕ್ ಎಚ್ಚರಿಕೆ ನೀಡಿದರು.