ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ಸು ನಾಳೆ ಎಂದಿನಂತೆ ಸಂಚಾರ; ನೌಕರರಿಗೆ ಕಡ್ಡಾಯ ಹಾಜರಾತಿಗೆ ನಿಗಮ ಸೂಚನೆ
ಕಾವೇರಿ ನದಿ ನೀರನ್ನು ತಮಿಳು ನಾಡಿಗೆ ಹರಿಸುವುದನ್ನು ವಿರೋಧಿಸಿ ನಾಳೆ ಶುಕ್ರವಾರ ನಡೆಯುತ್ತಿರುವ ಅಖಂಡ ಕರ್ನಾಟಕ ಬಂದ್ ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ.
Published: 28th September 2023 02:14 PM | Last Updated: 28th September 2023 03:36 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳು ನಾಡಿಗೆ ಹರಿಸುವುದನ್ನು ವಿರೋಧಿಸಿ ನಾಳೆ ಶುಕ್ರವಾರ ನಡೆಯುತ್ತಿರುವ ಅಖಂಡ ಕರ್ನಾಟಕ ಬಂದ್ ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ.
ಆದರೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳು ಸಂಚರಿಸಲಿವೆ. ನಿಗಮದ ನೌಕರರು ನಾಳೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ದೀರ್ಘಾವಧಿ, ವಾರದ ರಜೆ ಹೊರತುಪಡಿಸಿ ನೌಕರರು ಹೊರತುಪಡಿಸಿ ಉಳಿದ ಎಲ್ಲಾ ನೌಕರರು ಕಡ್ಡಾಯವಾಗಿ ನಾಳೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನೌಕರರಿಗೆ ಸಾರಿಗೆ ನಿಗಮಗಳು ಮೌಖಿಕ ಸೂಚನೆ ನೀಡಿವೆ.
ಸಾರಿಗೆ ನಿಗಮಗಳು ಅಗತ್ಯ ಸೇವೆಗಳ ಅಡಿಯಲ್ಲಿ ಬರುವುದರರಿಂದ ಸೇವೆ ನೀಡಬೇಕು. ಹೀಗಾಗಿ ಯಾರು ಸಹ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತಿಲ್ಲ. ಒಂದು ವೇಳೆ ಕೆಲಸಕ್ಕೆ ಗೈರು ಆಗಿ ಬಂದ್ ನಲ್ಲಿ ಭಾಗಿಯಾದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುವುದಾಗಿ ಎಚ್ಚರಿಕೆ ಸಹ ನೀಡಲಾಗಿದೆ.
ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಮೇಲೆ ಪರಿಣಾಮ ಸಾಧ್ಯತೆ; ಯಾವ ಸೇವೆ ಲಭ್ಯ, ಯಾವುದು ಅಲಭ್ಯ?
ಕರ್ನಾಟಕದ ಉತ್ತರ ಭಾಗದ ಬಳ್ಳಾರಿ, ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ಯಾದಗಿರಿ, ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ದಾವಣಗೆರೆಯ ರೈತರು ಮತ್ತು ವರ್ತಕರು ಬಂದ್‌ಗೆ ತಮ್ಮ ನೈತಿಕ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಆದರೆ ಬಂದ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಈ ಮಧ್ಯೆ, ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕೆಲ ಕಾರ್ಯಕರ್ತರು ಇಂದು ಕಾವೇರಿ ಹೃದಯ ಭಾಗವಾದ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಇವರು ಕಳೆದ 15 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ.
ರಾಜ್ಯ ಸರ್ಕಾರ ತಮಿಳುನಾಡಿಗೆ ಮೃದು ಧೋರಣೆ ತಾಳಿದ್ದು, ಕಾವೇರಿ ವಿವಾದ ವಿಚಾರವನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ.