ರಾಜ್ಯಾದ್ಯಂತ ಕಾವೇರಿ ಬಂದ್ ತೀವ್ರ, ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಪರಮೇಶ್ವರ್!
ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಶುಕ್ರವಾರ ರಾಜ್ಯಾದ್ಯಂತ ಬಂದ್‌ನಿಂದಾಗಿ ಬೆಂಗಳೂರು ಸೇರಿದಂತೆ ವಿವಿಧೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದರು.
Published: 29th September 2023 01:57 PM | Last Updated: 29th September 2023 08:42 PM | A+A A-

ಗೃಹ ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಶುಕ್ರವಾರ ರಾಜ್ಯಾದ್ಯಂತ ಬಂದ್‌ನಿಂದಾಗಿ ಬೆಂಗಳೂರು ಸೇರಿದಂತೆ ವಿವಿಧೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದರು.
ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ , ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಅವರು ಗೃಹ ಸಚಿವ ಪರಮೇಶ್ವರ ಅವರೊಂದಿಗೆ ಸಿಎಂ ಜೊತೆ ಚರ್ಚೆ ನಡೆಸಿದರು. ಸಿದ್ದರಾಮಯ್ಯ ಗೃಹ ಸಚಿವಾಲಯದಿಂದ ಜಿಲ್ಲಾವಾರು ಮಾಹಿತಿ ಪಡೆದುಕೊಂಡಿದ್ದು, ಮುಂದಿನ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಯಾವುದೇ ಹಿಂಸಾಚಾರದ ಘಟನೆಗಳು ವರದಿಯಾಗಿಲ್ಲವಾದರೂ, ಬಂದ್‌ನಿಂದ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವೆಡೆ ಪ್ರತಿಭಟನಾಕಾರರು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಭಾರೀ ಭದ್ರತಾ ಲೋಪವನ್ನು ತಪ್ಪಿಸಲಾಗಿದ್ದು, ಈ ಸಂಬಂಧ 25 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸರಿಗೆ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ ಎಂದು ಮೂಲಗಳು ವಿವರಿಸಿವೆ.
ಇದನ್ನೂ ಓದಿ: 'ಕಾವೇರಿ' ಗಲಾಟೆಗೆ ಕರ್ನಾಟಕ ಬಂದ್: ಬೆಂಗಳೂರು, ರಾಜ್ಯದ ದಕ್ಷಿಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತ
ಪೊಲೀಸರು ಪ್ರಮುಖ ಕನ್ನಡ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು. ಪ್ರಮುಖ ನಾಯಕರಲ್ಲಿ ಒಬ್ಬರಾದ ವಾಟಾಳ್ ನಾಗರಾಜ್ ಬುರ್ಖಾ ಧರಿಸಿ, ಪ್ರತಿಭಟನೆ ನಡೆಸಿದರು. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಕನ್ನಡಪರ ಹೋರಾಟಗಾರರನ್ನು ಬಂಧಿಸಿದೆ ಎಂದು ಅವರು ಕಿಡಿಕಾರಿದರು.
ಸರ್ಕಾರ ಬಂದ್‌ಗೆ ಬೆಂಬಲ ನೀಡುತ್ತಿಲ್ಲ. ಪೊಲೀಸರು ಪ್ರತಿಭಟನೆ ನಡೆಸದಂತೆ ಒತ್ತಡ ಹೇರುತ್ತಿದ್ದಾರೆ. ಕರ್ನಾಟಕವನ್ನು ಪೊಲೀಸ್ ರಾಜ್ಯವನ್ನಾಗಿ ಮಾಡಲಾಗಿದೆ. ಪೊಲೀಸರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ವಾಟಾಳ್ ನಾಗರಾಜ್, ಬೆಂಗಳೂರು ಒಂದರಲ್ಲೇ 50,000 ಪೊಲೀಸರು ಸೇರಿದಂತೆ ರಾಜ್ಯಾದ್ಯಂತ ಲಕ್ಷಾಂತರ ಪೊಲೀಸರನ್ನು ನಿಯೋಜಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರಿಂದ ಬಂದ್ ಯಶಸ್ವಿಯಾಗಿದೆ. ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸರಕಾರಕ್ಕೆ ಜನರ ಭಾವನೆ ಅರ್ಥವಾಗುತ್ತಿಲ್ಲ. ರಾಜ್ಯವನ್ನು ಗೂಂಡಾ ರಾಜ್ಯ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
'ಮಿಸ್ಟರ್ ಗೃಹ ಸಚಿವರೇ, ನೀವು ಯಾವಾಗ ಹೋರಾಟ ಅಥವಾ ಆಂದೋಲನ ನಡೆಸಿದ್ದೀರಿ? ನೀವು ದೇವರೆಂದು ಭಾವಿಸುತ್ತೀರಾ? ಎಂದು ಪ್ರಶ್ನಿಸಿದ ವಾಟಾಳ್ ನಾಗರಾಜ್, ನಾನು ಇಂದು ವಿಭಿನ್ನವಾದ ಉಡುಪಿನಲ್ಲಿದ್ದೇನೆ. ನೀವು ಇದನ್ನು ಬುರ್ಖಾ ಮತ್ತು ನ್ಯಾಯ ದೇವತೆಯ ಉಡುಗೆ ಎಂದು ಕರೆಯಬಹುದು. ನಮ್ಮ ಪ್ರತಿಭಟನೆಯ ಬಗ್ಗೆ ಪ್ರಧಾನಿ ಮೋದಿ ಮತ್ತು ಇಡೀ ದೇಶಕ್ಕೆ ತಿಳಿಯಬೇಕು ಎಂದು ಹೇಳಿದರು.