ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುಗಡೆಗೆ ಮತ್ತೆ ಸುಪ್ರೀಂ ಕೋರ್ಟ್ ಗೆ ಮನವಿ: ಸಚಿವ ದುರೈ ಮುರುಗನ್

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕದಾದ್ಯಂತ ಬಂದ್ ನಡೆಸುತ್ತಿರುವಂತೆಯೇ ಅತ್ತ ತಮಿಳುನಾಡು ಮತ್ತೆ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.
ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್
ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕದಾದ್ಯಂತ ಬಂದ್ ನಡೆಸುತ್ತಿರುವಂತೆಯೇ ಅತ್ತ ತಮಿಳುನಾಡು ಮತ್ತೆ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸಿನ ಅನ್ವಯ ರಾಜ್ಯದ ಜಲಾಶಯಗಳಲ್ಲಿ ನೀರು ಇಲ್ಲದಿದ್ದರೂ  ನಿತ್ಯ 3000 ಕ್ಯುಸೆಕ್ ನೀರು ಹರಿಸಲಾಗುತ್ತಿದ್ದರೂ ತಮಿಳುನಾಡಿಗೆ ಸಾಕಾಗುವುದಿಲ್ಲವಂತೆ. ಕರ್ನಾಟಕದಿಂದ ಮತ್ತೆ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಹೇಳಿದ್ದಾರೆ.

ಚೆನ್ನೈನಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದೂರೈ ಮುರುಗನ್,  ಈ ಸಂಬಂಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು, ನೀರು ಬಿಡುಗಡೆ ಸಂಬಂಧ ನ್ಯಾಯಾಲಯ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲಿದೆ ಎಂದರು.

ಈ ಮಧ್ಯೆ ಇಂದು ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸು ಬಗ್ಗೆ ನಿರ್ಣಯ ಕೈಗೊಳ್ಳುವ ಸಂಬಂಧ ಕಾವೇರಿ ನೀರುನಿರ್ವಹಣಾ ಪ್ರಾಧಿಕಾರ ಶುಕ್ರವಾರ ಸಭೆ ನಡೆಸಲಿದೆ.ಇದರಲ್ಲಿ ಕರ್ನಾಟಕ, ತಮಿಳುನಾಡು ರಾಜ್ಯಗಳ ಪ್ರತಿನಿಧಿಗಳೂ ಪಾಲ್ಗೊಳ್ಳಲಿದ್ದು, ತಮ್ಮ ತಮ್ಮ ಅಹವಾಲು ಮಂಡನೆ ಮಾಡಲಿದ್ದಾರೆ. ಸಭೆಯಲ್ಲಿ ಕೈಗೊಳ್ಳಲಾಗುವ ತೀರ್ಮಾನ ಕುರಿತು ಕುತೂಹಲ ಮೂಡಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com