ಕೋಲಾರ: ಕೌಟುಂಬಿಕ ಕಲಹ; ಇಬ್ಬರು ಗಂಡು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ!

ಇಬ್ಬರು ಗಂಡು ಮಕ್ಕಳಿಗೆ ವಿಷ ಕುಡಿಸಿ ತಂದೆಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೋಲಾರ: ಇಬ್ಬರು ಗಂಡು ಮಕ್ಕಳಿಗೆ ವಿಷ ಕುಡಿಸಿ ತಂದೆಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾರಾಯಣಸ್ವಾಮಿ (40) ಹಾಗೂ ಮಕ್ಕಳಾದ ಪವನ್ (12), ನಿತಿನ್ (10) ಮೃತ ದುರ್ದೈವಿಗಳು. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಐಪಿಎಲ್ ಬೆಟ್ಟಿಂಗ್ ಹುಚ್ಚು: 1 ಕೋಟಿ ರೂ. ಸಾಲ ಮಾಡಿದ ಪತಿ; ಪತ್ನಿ ಆತ್ಮಹತ್ಯೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com