ಬೆಂಗಳೂರು: ಯುವತಿ ಕಾರು ಚೇಸ್ ಮಾಡಿ ಕಿರುಕುಳ ನೀಡಿದ ಇಬ್ಬರು ಬೈಕ್ ಸವಾರರ ಬಂಧನ

ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರನ್ನು ಚೇಸ್‌ ಮಾಡಿಕೊಂಡು ಬಂದು ಕಿರುಕುಳ ನೀಡಿದ ಇಬ್ಬರು ಬೈಕ್‌ ಸವಾರರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು

ಬೆಂಗಳೂರು: ನಗರದಲ್ಲಿ ಭಾನುವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರನ್ನು ಚೇಸ್‌ ಮಾಡಿಕೊಂಡು ಬಂದು ಕಿರುಕುಳ ನೀಡಿದ ಇಬ್ಬರು ಬೈಕ್‌ ಸವಾರರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮಡಿವಾಳ-ಕೋರಮಂಗಲ ರಸ್ತೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕಾರಿನಲ್ಲಿ ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿ ಇಬ್ಬರು ಬೈಕ್ ಸವಾರರು ಕಿರುಕುಳ ನೀಡಿದ್ದಾರೆ.

ಬಂಧಿತ ಆರೋಪಿಗಳನ್ನು ತೇಜಸ್ ಮತ್ತು ಜಗನ್ನಾಥ್ ಗುರುತಿಸಲಾಗಿದೆ. ಮೂರನೇ ಆರೋಪಿ ಕಣ್ಣನ್ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಆರೋಪಿಗಳು
Metro train ಮಹಿಳಾ ಭದ್ರತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: BMRCL ಹಿರಿಯ ಅಧಿಕಾರಿ ವಿರುದ್ಧ FIR

ಕಿಡಿಗೇಡಿಗಳು ಮಡಿವಾಳ, ಸೆಂಟ್ ಜಾನ್ಸ್ ನಿಂದ ಕೋರಮಂಗಲವರೆಗೂ ಹಿಂಬಾಲಿಸಿಕೊಂಡು ಬಂದಿದ್ದಾರೆ. ಇದರಿಂದ ಆತಂಕಗೊಂಡ ಯುವತಿ ಸಹಾಯಕ್ಕಾಗಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಲರ್ಟ್‌ ಆದ ಪೊಲೀಸರು ಯುವತಿಯರು ಇದ್ದ ಜಾಗಕ್ಕೆ ಬಂದಿದ್ದಾರೆ. ಪೊಲೀಸರನ್ನು ಕಂಡೊಡನೆ ಪುಂಡರು ಎಸ್ಕೇಪ್ ಆಗಿದ್ದಾರೆ.

ಘಟನೆಯ ವಿಡಿಯೋ ಮತ್ತು ದುಷ್ಕರ್ಮಿಗಳ ವಾಹನ ಸಂಖ್ಯೆಯನ್ನು ಸಹ ಯುವತಿ ತಮಗೆ ನೀಡಿದ್ದರಿಂದ ಆರೋಪಿಗಳನ್ನು ಪತ್ತೆಹಚ್ಚಲು ಸಹಾಯ ಮಾಡಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com