ಬಿಜೆಪಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಡಿಕೆಶಿ ವಿರುದ್ಧ ಎಫ್ಐಆರ್ ದಾಖಲು

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on: 

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದಾರೆ.

ಡಿಕೆ.ಶಿವಕುಮಾರ್
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆ ಆರಂಭ

ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ ವೊಂದನ್ನು ಕಾಂಗ್ರೆಸ್ ಪಕ್ಷ ಹಂಚಿಕೊಂಡಿತ್ತು. ಆದ್ದರಿಂದ ಫೋರ್ಜರಿ, ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು.

ಇದೀಗ ಡಿಕೆ ಶಿವಕುಮಾರ್​ ಮತ್ತು ಬಿ.ಆರ್.ನಾಯ್ಡು ವಿರುದ್ಧ 153(a), 504, 506,464 ಸೆಕ್ಷನ್​​ ಅಡಿ ಎಫ್​ಐಆರ್​ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com