ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ಡಿಕ್ಕಿ, ಮೂವರು ಸಾವು

ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ 20 ಕುರಿಗಳು ಸಾವನ್ನಪ್ಪಿದ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ 20 ಕುರಿಗಳು ಸಾವನ್ನಪ್ಪಿದ ದಾರುಣ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ಮಂಗಳವಾರ ನಡೆದಿದೆ.

ಇಂದು ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41) ಮತ್ತು ಶಿವರಾಜ್ ಹೊಳೆಪ್ಪನವರ(22) ಮೃತಪಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಪ್ರತ್ಯೇಕ ಅಪಘಾತ; 6 ವರ್ಷದ ಮಗು ಸೇರಿ ಮೂವರ ಸಾವು

ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಬೀರಪ್ಪ ದೊಡ್ಡಚಿಕ್ಕಣ್ಣನವರ, ನಿಂಗರಾಜ್ ಹಿತ್ತಲಮನಿ ಮತ್ತು ನಿಂಗಪ್ಪ ಕೊರಗುಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com