ಕರ್ನಾಟಕಕ್ಕೆ ಬಂದು ಮತ ಕೇಳಲು ಅಮಿತ್ ಶಾಗೆ ಯಾವ ನೈತಿಕತೆ ಇದೆ: ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ. ಅಮಿತ್ ಶಾ ಅವರು ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರು, ಕರ್ನಾಟಕಕ್ಕೆ ಬರ ಪರಿಹಾರ ಹಣ ನೀಡಿದ್ದಾರೆಯೇ, ಕರ್ನಾಟಕಕ್ಕೆ ಬಂದು ಮತ ಕೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಅಮಿತ್ ಶಾ, ಸಿದ್ದರಾಮಯ್ಯ
ಅಮಿತ್ ಶಾ, ಸಿದ್ದರಾಮಯ್ಯ

ಮೈಸೂರು: ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ. ಅಮಿತ್ ಶಾ ಅವರು ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರು, ಕರ್ನಾಟಕಕ್ಕೆ ಬರ ಪರಿಹಾರ ಹಣ ನೀಡಿದ್ದಾರೆಯೇ, ಕರ್ನಾಟಕಕ್ಕೆ ಬಂದು ಮತ ಕೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಹೈಕಮಾಂಡ್ ಬಳಿ ಕರ್ನಾಟಕಕ್ಕೆ ಬರ ಪರಿಹಾರ ಕೊಡಿ ಎಂದು ಕೇಳಬೇಕಲ್ಲವೇ, ಮೇಕೆದಾಟುಗೆ ಅನುಮತಿ ಕೊಟ್ಟಿದ್ದಾರೆಯೇ, ಮಹದಾಯಿಗೆ ಪರಿಸರ ಇಲಾಖೆಯಿಂದ ಅನುಮತಿ ನೀಡಿದ್ದಾರೆಯೇ, ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿದ್ದಾರೆಯೇ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ಪರಿಹಾರ ಕೊಟ್ಟಿದ್ದಾರೆಯೇ ಎಂದು ಸರಣಿ ಪ್ರಶ್ನೆಗಳನ್ನು ಸಿಎಂ ಕೇಳಿದರು.

ನಾವು ಕೇಂದ್ರ ಸರ್ಕಾರಕ್ಕೆ ಮೂರು ಮನವಿ ಪತ್ರಗಳನ್ನು ಕೊಟ್ಟೆವು. ಕೇಂದ್ರ ತಂಡ ಬಂದು ಬರ ಅಧ್ಯಯನ ನಡೆಸಿತು. ನಾನು ಡಿಸೆಂಬರ್ ನಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದೆ. ಡಿಸೆಂಬರ್ 23ನೇ ತಾರೀಖಿಗೆ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದರು. ಆದಾಗಿ 5 ತಿಂಗಳಾದರೂ ಕರ್ನಾಟಕಕ್ಕೆ ಬರ ಪರಿಹಾರಕ್ಕ ಒಂದು ರೂಪಾಯಿನೂ ನೀಡಿಲ್ಲ ಎಂದು ಆರೋಪಿಸಿದರು.

ಇದನ್ನು ಕೇಳಿದರೆ ಕುಮಾರಸ್ವಾಮಿಯವರೇ ಬಿಜೆಪಿಯ ವಕ್ತಾರರಾಗಿದ್ದಾರೆ. ಇದು 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಕೇಳಿದರು.

ಅಮಿತ್ ಶಾ, ಸಿದ್ದರಾಮಯ್ಯ
'2028ಕ್ಕೆ ನನಗೆ 82 ವರ್ಷವಾಗುತ್ತದೆ, ಇನ್ನು ನಾನು ಚುನಾವಣೆಗೆ ನಿಲ್ಲಬಾರದು ಎಂದು ತೀರ್ಮಾನ ಮಾಡಿದ್ದೇನೆ'

ಸರಣಿ ಟ್ವೀಟ್ ಮೂಲಕ ಅಮಿತ್ ಶಾಗೆ ಪ್ರಶ್ನೆಗಳ ಸುರಿಮಳೆ: ಈ ಬಗ್ಗೆ ಇಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯನವರು ನೇರವಾಗಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಟೀಕೆ ಮಾಡಿದ್ದಾರೆ. ಅಮಿತ್ ಶಾ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಭೆ ನಡೆಸುತ್ತಿರುವ ಹೊತ್ತಿನಲ್ಲಿ ಪ್ರಶ್ನೆಗಳನ್ನು ಅವರ ಮುಂದಿಟ್ಟಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ.ರಾಷ್ಟ್ರೀಕೃತ ಬ್ಯಾಂಕ್, ರೈಲ್ವೆ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ಸ್ವಾಮ್ಯದ ಎಲ್ಲ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನೂ ಮಾಧ್ಯಮವಾಗಿ ಬಳಸಲು ಅವಕಾಶ ಇರಬೇಕೆಂಬುದು ಕನ್ನಡಿಗರ ಬಹುವರ್ಷಗಳ ಬೇಡಿಕೆ. ಈ ಅವಕಾಶದಿಂದ ವಂಚಿತರಾದ ಉದ್ಯೋಗಾರ್ಥಿ ಕನ್ನಡಿಗ ಯುವಕಿ-ಯುವತಿಯರು ಉದ್ಯೋಗದಿಂದಲೂ ವಂಚಿತರಾಗಿ ನಿರುದ್ಯೋಗಿಗಳಾಗುತ್ತಿದ್ದಾರೆ. ಇದಕ್ಕೆ ನೀವೇ ಹೊಣೆ ಅಲ್ಲವೇ? ಹಿಂದಿ ಎನ್ನುವುದು ರಾಷ್ಟ್ರಭಾಷೆ ಎನ್ನುವ ಸುಳ್ಳನ್ನು ಮತ್ತೆ ಮತ್ತೆ ಹೇಳಿ ಆ ಭಾಷೆಯನ್ನು ಕನ್ನಡಿಗರ ಮೇಲೆ ಹೇರುತ್ತಿರುವುದು ಯಾಕೆ? ಹಿಂದಿ ರಾಷ್ಟ್ರಭಾಷೆ ಎನ್ನುವುದನ್ನು ಸಂವಿಧಾನ ಹೇಳಿದೆಯೇ , ಹೇಳಿದ್ದರೆ ಸಂವಿಧಾನದ ಯಾವ ಪರಿಚ್ಚೇದಲ್ಲಿ ಹೇಳಲಾಗಿದೆ? ದಯವಿಟ್ಟು ಅದನ್ನು ಕನ್ನಡಿಗರ ಮುಂದೆ ತೆರೆದಿಡಿ ಎಂದು ಕೇಳಿದ್ದಾರೆ.

ಪ್ರಧಾನಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯ ಆಧಾರದಲ್ಲಿ ಮತಕೇಳುವ ವಿಶ್ವಾಸ ನಿಮಗೆ ಇಲ್ಲ. ಮಾಡಿರುವ ತಪ್ಪುಗಳನ್ನು ಒಪ್ಪಿಕೊಳ್ಳುವ ಸಹೃದಯತೆಯೂ ನಿಮಗೆ ಇಲ್ಲ. ರಾಜಕೀಯ ಲಾಭಕ್ಕಾಗಿ ಸಮಾಜದ ಶಾಂತಿ-ಸೌಹಾರ್ದತೆಯನ್ನು ಕೆಡಿಸಬಾರದೆಂಬ ಒಳ್ಳೆಯತನದ ವಿವೇಕವೂ ನಿಮಗೆ ಇಲ್ಲ. ನೀವು ನೀಡಿರುವ ಸಲಹೆಯಂತೆಯೇ ತಾವು ಗಲಭೆ ನಡೆಸುತ್ತಿರುವುದಾಗಿ ಮೈಸೂರಿನ ಸಂಸದನೊಬ್ಬ ಬಹಿರಂಗ ಹೇಳಿಕೆ ನೀಡಿದ್ದಾನೆ. ನೀವು ಹೋದಲ್ಲಿ ಬಂದಲ್ಲಿ ಗಲಭೆ ನಡೆದು ಶಾಂತಿ ಭಂಗವಾಗುತ್ತಿರುವುದಕ್ಕೆ ಇದೇ ಕಾರಣವೇ? ಎಂದು ಕೇಳಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇಲ್ಲ: ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇಲ್ಲ. ಸುಮ್ಮನೆ ಕೆಲವೊಮ್ಮೆ ಊಹಾಪೋಹದ ವರದಿ ಬರೆಯುತ್ತಾರೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಯಾವ ಹಣದ ಸಮಸ್ಯೆ ಇಲ್ಲ. ಒಂದೆರಡು ಕಡೆ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸುವಂತೆ ಹೇಳಿದ್ದೇನೆ. ಚುನಾವಣೆ ಇರುವುದರಿಂದ ಸಭೆ ಮಾಡಲು ಆಗುತ್ತಿಲ್ಲ ಅಷ್ಟೇ ಯಾವ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com