ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200ರ ಗಡಿ ದಾಟಲ್ಲ; ರಾಜ್ಯದಲ್ಲಿ 10 ಸ್ಥಾನ ಗೆಲ್ಲುವುದೇ ಅನುಮಾನ: ಅಜಯ್ ಸಿಂಗ್

"ಅಬ್ ಕಿ ಬಾರ್ ಚಾರ್ಸೋ ಪರ್ ಎಂಬ ಘೋಷಣೆ ಬಿಜೆಪಿಯ ಕನಸು. ಅದು ಕನಸಾಗಿಯೇ ಉಳಿಯುತ್ತದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸೀಟುಗಳ ಗಡಿ ದಾಟುವುದಿಲ್ಲ.
ಅಜಯ್ ಸಿಂಗ್
ಅಜಯ್ ಸಿಂಗ್

ಕಲಬುರಗಿ: "ಅಬ್ ಕಿ ಬಾರ್ ಚಾರ್ಸೋ ಪರ್ ಎಂಬ ಘೋಷಣೆ ಬಿಜೆಪಿಯ ಕನಸು. ಅದು ಕನಸಾಗಿಯೇ ಉಳಿಯುತ್ತದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸೀಟುಗಳ ಗಡಿ ದಾಟುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿಗೆ 10 ಕ್ಷೇತ್ರ ಗೆಲ್ಲುವುದು ಕಷ್ಟ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ಕಲಬುರಗಿ ಜಿಲ್ಲೆಯ ಶಹಾಬಾದ ಪಟ್ಟಣದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಡಾ.ಅಜಯ್ ಸಿಂಗ್, ಕರ್ನಾಟಕದಲ್ಲಿ ಹೀನಾಯವಾಗಿ ಸೋಲುವ ಭಯದಿಂದ ಬಿಜೆಪಿಯು ಜನತಾದಳ (ಎಸ್) ಜೊತೆ ಮೈತ್ರಿ ಮಾಡಿಕೊಂಡಿದೆ.

ಕಳೆದ ಬಾರಿ ಅಂದರೆ 2019 ರ ಸಂಸತ್ ಚುನಾವಣೆಯಲ್ಲಿ ಪುಲ್ವಾಮಾ ದಾಳಿಯಲ್ಲಿ ಸೇನಾ ಸಿಬ್ಬಂದಿಯ ಬಲಿದಾನದ ಮೇಲೆ ಕೇಂದ್ರೀಕರಿಸಿದ ಬಿಜೆಪಿ ಅಧಿಕಾರಕ್ಕೆ ಬಂದಿತು. ''ಈ ಬಾರಿ ಕೇಂದ್ರ ಸರಕಾರವು ಇಡಿ, ಐಟಿ ಮತ್ತು ಇತರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಅರವಿಂದ್ ಕೇಜ್ರಿವಾಲ್, ಹೇಮಂತ್ ಸೋರೆನ್ ಮುಂತಾದ ವಿರೋಧ ಪಕ್ಷದ ನಾಯಕರನ್ನು ಬಂಧಿಸುತ್ತಿದೆ,'' ಎಂದು ಅವರು ಹೇಳಿದರು. "ಎಲ್ಲಾ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಮತ್ತು ಉದ್ಯೋಗ ಸೃಷ್ಟಿ ಕಾರ್ಯಕ್ರಮಗಳಿಗೆ ಯಾವುದೇ ಪ್ರಾಮುಖ್ಯತೆಯನ್ನು ನೀಡಲಾಗಿಲ್ಲ" ಎಂದು ಡಾ. ಅಜಯ್ ಸಿಂಗ್ ಹೇಳಿದರು.

ಇದಕ್ಕೂ ಮುನ್ನ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 1000 ರೂ.ಗಳನ್ನು ನೀಡುವುದಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಆದರೆ ಎಲ್ಲಾ ಭರವಸೆಗಳನ್ನು ರದ್ದುಗೊಳಿಸುವುದಾಗಿ ಬಿಜೆಪಿ ಘೋಷಿಸಿದೆ, ಕಲ್ಯಾಣ ಯೋಜನೆಗಳ ಅನುಷ್ಠಾನದ ಬದ್ಧತೆಯನ್ನು ಪರಿಗಣಿಸಿ ಯಾರಿಗೆ ಮತ ಹಾಕಬೇಕು ಎಂದು ಜನತೆ ನಿರ್ಧರಿಸಬೇಕು ಎಂದರು.

ಅಜಯ್ ಸಿಂಗ್
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ನೇಮಕ

ಶಕ್ತಿ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಯುವ ನಿಧಿ ಸೇರಿದಂತೆ 5 ಖಾತ್ರಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ನೀಡಿದ ಭರವಸೆಯನ್ನು ಕಾಂಗ್ರೆಸ್ ಈಡೇರಿಸಿದೆ ಎಂದು ಡಾ.ಶರಣಪ್ರಕಾಶ್ ಹೇಳಿದರು. ಆರೆಸ್ಸೆಸ್ ಮತ್ತು ಬಿಜೆಪಿಯ ಷಡ್ಯಂತ್ರದಿಂದ 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಲು ಕಂಡಿದ್ದಾರೆ ಎಂದು ಆರೋಪಿಸಿದರು.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ 5 ಭರವಸೆಗಳನ್ನು ಜಾರಿಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ. "ನಾವು ಅವರ ವಿಶ್ವಾಸವನ್ನು ಗಳಿಸಿರುವುದರಿಂದ ಜನರು ನಮ್ಮನ್ನು ನಂಬುತ್ತಾರೆ ಮತ್ತು 5 ಭರವಸೆಗಳು ಜನರ ಜೀವನದಲ್ಲಿ ವಿಶೇಷವಾಗಿ ಬಡವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುತ್ತಿವೆ" ಎಂದು ಅವರು ಹೇಳಿದರು. ಕೇಂದ್ರ ಸರ್ಕಾರ ವಸ್ತುಗಳ ಬೆಲೆ ಹೆಚ್ಚಿಸಿ ತೆರಿಗೆ ಹೆಚ್ಚಿಸಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ನಾವು ಉಸಿರಾಡುವ ಆಮ್ಲಜನಕವನ್ನು ಹೊರತುಪಡಿಸಿ ಎಲ್ಲದಕ್ಕೂ ತೆರಿಗೆ ಇದೆ, ಕೇಂದ್ರ ಸರ್ಕಾರ ತೆರಿಗೆ ಸಂಗ್ರಹಿಸುತ್ತಿದ್ದರೂ ನಮ್ಮ ರಾಜ್ಯದ ಪಾಲನ್ನು ನೀಡುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಕೇಂದ್ರ ಸರ್ಕಾರವು ಕೃಷಿ ಸಾಲವನ್ನು ಮನ್ನಾ ಮಾಡಲು ನಿರಾಕರಿಸುತ್ತದೆ ಆದರೆ ಕೋಟ್ಯಂತರ ರೂಪಾಯಿಗಳ ಕಾರ್ಪೊರೇಟ್ ಸಾಲವನ್ನು ಮನ್ನಾ ಮಾಡಿದೆ," ಎಂದು ಅವರು ಆರೋಪಿಸಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಜನತೆಗೆ ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com