ಮಂಗಳೂರು: ದಕ್ಷಿಣ ಕನ್ನಡ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಪರ ಸ್ಮೃತಿ ಇರಾನಿ ಪ್ರಚಾರ!

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಪರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಪ್ರಚಾರ ನಡೆಸಲಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ಕ್ಯಾಪ್ಟನ್ ಚೌಟ ನಾಮಪತ್ರ ಸಲ್ಲಿಸಲಿದ್ದಾರೆ
ಸ್ಮೃತಿ ಇರಾನಿ
ಸ್ಮೃತಿ ಇರಾನಿ
Updated on

ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಪರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಪ್ರಚಾರ ನಡೆಸಲಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ಕ್ಯಾಪ್ಟನ್ ಚೌಟ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಮುಖಂಡ ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತಿತರರು ಆಗಮಿಸಲಿದ್ದಾರೆ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೂ ಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಆದರೆ ಅವರು ಬರುವುದು ಇನ್ನೂ ಖಚಿತವಾಗಿಲ್ಲ ಎಂದಿದ್ದಾರೆ.

ಸ್ಮೃತಿ ಇರಾನಿ
ಲೋಕಸಭೆ ಚುನಾವಣೆ 2024: ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸದಂತೆ ಜಿಲ್ಲಾ ಬಿಜೆಪಿ ಸುತ್ತೋಲೆ!

ಬಿಜೆಪಿ ನಾಯಕ ಸತ್ಯಜಿತ್ ಸುರತ್ಕಲ್ ಅವರು ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿರುವ ಕುರಿತು ಮಾತನಾಡಿದ ಕುಂಪಲ , ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು. ಸುರತ್ಕಲ್ ಹೇಳಿಕೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಗೆ ಎಲ್ಲರ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಒಂಬತ್ತು ಮಂಡಲಗಳು, 61 ಮಹಾಶಕ್ತಿ ಕೇಂದ್ರಗಳು ಮತ್ತು 495 ಶಕ್ತಿ ಕೇಂದ್ರಗಳಲ್ಲಿ ಇದುವರೆಗೆ ಮೊದಲ ಸುತ್ತಿನ ಪ್ರಚಾರ ಪೂರ್ಣಗೊಂಡಿದೆ ಎಂದು ಅವರು ಹೇಳಿದರು. ಶನಿವಾರದಿಂದ ಬೂತ್ ಮಟ್ಟದ ಪ್ರಚಾರ ಆರಂಭವಾಗಲಿದೆ. ಮಹಾ ಅಭಿಯಾನ ಅಥವಾ ಮನೆ-ಮನೆ ಪ್ರಚಾರ ಏಪ್ರಿಲ್ 21 ರಿಂದ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com