ತಾಪಮಾನ ಹೆಚ್ಚಳ: ಕಳೆದ 10 ವರ್ಷಗಳಲ್ಲೇ ಈ ಬಾರಿ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ!

ಮಳೆ ಕೊರತೆ, ತಾಪಮಾನ ಹೆಚ್ಚಳದಿಂದಾಗಿ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ 10 ವರ್ಷಗಳ ಬಳಿಕ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ.
ಪ್ರವಾಸಿಗರು ವಿಶ್ರಾಂತಿ ಪಡೆಯಲು ಗುಡಿಸಲು ಕಟ್ಟಿರುವುದು.
ಪ್ರವಾಸಿಗರು ವಿಶ್ರಾಂತಿ ಪಡೆಯಲು ಗುಡಿಸಲು ಕಟ್ಟಿರುವುದು.

ಹೊಸಪೇಟೆ: ಮಳೆ ಕೊರತೆ, ತಾಪಮಾನ ಹೆಚ್ಚಳದಿಂದಾಗಿ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ 10 ವರ್ಷಗಳ ಬಳಿಕ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ.

ಜಿಲ್ಲೆಯಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುತ್ತಿದ್ದು, ಇದರ ಪರಿಣಾಮ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಅಂಕಿಅಂಶಗಳ ಪ್ರಕಾರ, ಕಳೆದ 15 ದಿನಗಳಿಂದ ಪ್ರತಿದಿನ 400 ರಿಂದ 500 ಪ್ರವಾಸಿಗರು ಮಾತ್ರ ಹಂಪಿಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ.

ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸಾಮಾನ್ಯವಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗಬೇಕಿತ್ತು. ಆದರೆ, ಬಿಸಿಲಿನ ತಾಪದಿಂದಾಗಿ ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಲು ಮೂಗು ಮುರಿಯುತ್ತಿದ್ದಾರೆ.

ಬಿಸಿಲ ದಗೆ ನೀಗಿಸಲು ಜಿಲ್ಲಾಡಳಿತ ಕೆಲವು ಗುಡಿಸಲುಗಳನ್ನು ನಿರ್ಮಿಸಿದ್ದು, ಸುರಕ್ಷತಾ ಕ್ರಮಗಳನ್ನೂ ಕೈಗೊಂಡಿದೆ. ಪಾರಂಪರಿಕ ತಾಣದಲ್ಲಿ ವ್ಯಾಪಾರ ವಹಿವಾಟು ಕೂಡ ಕುಂಠಿತಗೊಂಡಿದೆ.

ಪ್ರವಾಸಿಗರು ವಿಶ್ರಾಂತಿ ಪಡೆಯಲು ಗುಡಿಸಲು ಕಟ್ಟಿರುವುದು.
ವಿಜಯನಗರ ಜಿಲ್ಲಾ ವ್ಯಾಪ್ತಿಗೆ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಸೇರಿಸಲು ಪ್ರಸ್ತಾಪ!

ಪ್ರವಾಸಿ ಮಾರ್ಗದರ್ಶಿ ಸಂಘದ ರಾಜ್ಯಾಧ್ಯಕ್ಷ ವಿರೂಪಾಕ್ಷಿ ವಿ ಹಂಪಿ ಮಾತನಾಡಿ, ಕಳೆದ ಎರಡು ವಾರಗಳಲ್ಲಿ 600 ಪ್ರವಾಸಿಗರೂ ಕೂಡ ಹಂಪಿಗೆ ಭೇಟಿ ನೀಡಿಲ್ಲ. ಇದು ಕಳೆದ 10 ವರ್ಷಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ಪ್ರವಾಸಿಗರ ಭೇಟಿಯಾಗಿದೆ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಬೇಸಿಗೆಯಲ್ಲಿ ಸುಮಾರು 1,500 ಪ್ರವಾಸಿಗರು ಭೇಟಿ ನೀಡುತ್ತಾರೆ, ಆದರೆ ಈ ವರ್ಷ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ.

ಪ್ರವಾಸಿ ತಾಣವನ್ನೇ ಜೀವನೋಪಾಯವಾಗಿಟ್ಟುಕೊಂಡು ಜೀವನ ನಡೆಸುತ್ತಿರುವವರಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಇದರ ಜೊತೆಗೆ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಹಂಪಿಯನ್ನು ಮುಚ್ಚಲಾಗಿದೆ ಎಂದ ಪೋಸ್ಟ್ ಗಳೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇಂತಹ ವದಂತಿಗಳನ್ನು ಜನರು ನಂಬಬಾರದು. ಜಿಲ್ಲಾಡಳಿತವು ಹಂಪಿಯಲ್ಲಿ ಕುಡಿಯುವ ನೀರು, ಗುಡಿಸಲುಗಳು ಮತ್ತು ವೈದ್ಯಕೀಯ ಸಿಬ್ಬಂದಿ ನೇಮಿಸಿ, ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ವಿಜಯನಗರ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮಾತನಾಡಿ, ಹಂಪಿ ಮತ್ತು ಅದರ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಸಾಮಾನ್ಯವಾಗಿ ತಾಪಮಾನ ಹೆಚ್ಚಾಗಿರುತ್ತದೆ. ಇದು ನೈಸರ್ಗಿಕ ವಿದ್ಯಮಾನವಾಗಿದೆ. ಆದರೆ, ಸಣ್ಣ ಟ್ರ್ಯಾಕ್ಟರ್‌ಗಳನ್ನು ಬಳಸಿ ಪ್ರವಾಸಿಗರ ಮೇಲೆ ನೀರು ಚಿಮುಕಿಸುವಂತಹ ಕ್ರಮಗಳನ್ನು ಸಹ ಆಡಳಿತ ನಡೆಸುತ್ತಿದೆ. ಹಂಪಿಯ ಸೊಬಗನ್ನು ಸವಿಯಲು ಮುಂಜಾನೆ ಮತ್ತು ಸಂಜೆ ಸೂಕ್ತ ಸಮಯವಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com