ಮೈಸೂರಿನ ಯುನೈಟೆಡ್ ಬ್ರೂವರೀಸ್‌ನಲ್ಲಿದ್ದ 98 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ಜಪ್ತಿ
ಮೈಸೂರು: ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕ ಅಬಕಾರಿ ಇಲಾಖೆಯು ಮೈಸೂರು ಜಿಲ್ಲೆಯ ಯುನೈಟೆಡ್ ಬ್ರೂವರೀಸ್ ಘಟಕದಿಂದ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಅಬಕಾರಿ ಇಲಾಖೆ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಏಪ್ರಿಲ್ 2ರಂದು ನಂಜನಗೂಡು ತಾಲೂಕಿನ ಸಾರಾಯಿ ಘಟಕದ ಮೇಲೆ ದಾಳಿ ನಡೆಸಿದ್ದರು.
98 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಸಾರಾಯಿ ಘಟಕದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಘಟಕದಿಂದ ಏಪ್ರಿಲ್ 2 ರಂದು 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ನಾಗಶಯನ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
98 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿ ಸಾರಾಯಿ ಘಟಕದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ದೂರವಾಣಿ ಕರೆ ಮೇರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಸಾರಾಯಿ ಘಟಕಕ್ಕೆ ಭೇಟಿ ನೀಡಿದ್ದರು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

