ಲೋಕಸಭಾ ಚುನಾವಣೆ 2024: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 90,000 ಲೀಟರ್ ಮದ್ಯ ವಶಕ್ಕೆ

ಲೋಕಸಭಾ ಚುನಾವಣೆ 2024 ಕ್ಕೆ ನೀತಿ ಸಂಹಿತೆ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು 90,443 ಲೀಟರ್ ಗಳಷ್ಟು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಮದ್ಯ
ಮದ್ಯ

ದಕ್ಷಿಣ ಕನ್ನಡ: ಲೋಕಸಭಾ ಚುನಾವಣೆ 2024 ಕ್ಕೆ ನೀತಿ ಸಂಹಿತೆ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು 90,443 ಲೀಟರ್ ಗಳಷ್ಟು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ನೀತಿ ಸಂಹಿತೆ ಜಾರಿಯಾದಾಗಿನಿಂದಲೂ 1,95,47,179 ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದ್ದರೆ, ಏ.03 ರಂದು Rs.8,69,950 ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಈ ವರೆಗೆ 278 ಎಫ್ಐಆರ್ ದಾಖಲಾಗಿದೆ. ರಾಜ್ಯದಲ್ಲಿ ಲೋಕಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಏ.26 ರಂದು ಮೊದಲ ಹಂತದಲ್ಲಿ ನಡೆದರೆ ಮೇ.7 ರಂದು 2 ನೇ ಹಂತದಲ್ಲಿ ಮತದಾನ ನಡೆಯಲಿದೆ.

ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ, ದೂರವಾಣಿ ಮೂಲಕ ಸ್ವೀಕರಿಸಿದ 157 ಮಾಹಿತಿ ವಿನಂತಿಗಳಿಗೆ ಪ್ರತಿಕ್ರಿಯೆ ನೀಡಿದ್ದು ಪರಿಹರಿಸಿದ್ದಾರೆ (1950). C-Whistle ಅಪ್ಲಿಕೇಶನ್ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸುವಲ್ಲಿ ಸಾಧನವಾಗಿದೆ ಎಂಬುದು ಸಾಬೀತಾಗಿದ್ದು, ಈ ಆಪ್ ಮೂಲಕ 59 ದೂರುಗಳನ್ನು ಸ್ವೀಕರಿಸಲಾಗಿದೆ.

ಮದ್ಯ
ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಕಲಬುರಗಿ ಬಿಜೆಪಿ ನಾಯಕರ ವಿರುದ್ಧ ಎಫ್ ಐ ಆರ್!

ರಾಷ್ಟ್ರೀಯ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಎನ್‌ಜಿಆರ್‌ಎಸ್) ಮೂಲಕ ಜಿಲ್ಲೆಯಲ್ಲಿ ಒಟ್ಟು 92 ದೂರುಗಳು ಬಂದಿದ್ದು, ಅವುಗಳಲ್ಲಿ 90 ಅನ್ನು ಪರಿಣಾಮಕಾರಿಯಾಗಿ ಪರಿಹರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com