ಅಕ್ರಮವಾಗಿ ಮಗು ದತ್ತು ಪ್ರಕರಣ: ರೀಲ್ಸ್ ಸ್ಟಾರ್ ಸೋನು ಗೌಡಗೆ ಜಾಮೀನು

ಕಾನೂನು ಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿದ್ದ ಬಿಗ್ ಬಾಸ್‌ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರಿಗೆ ಗುರುವಾರ ಜಾಮೀನು ಮಂಜೂರು.
ಸೋನು ಗೌಡ ಹಾಗೂ ಮಗು
ಸೋನು ಗೌಡ ಹಾಗೂ ಮಗು

ಬೆಂಗಳೂರು: ಕಾನೂನು ಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿದ್ದ ಬಿಗ್ ಬಾಸ್‌ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರಿಗೆ ಬೆಂಗಳೂರು ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಸೋನು ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸೋನು ಗೌಡ ಅವರು ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

8 ವರ್ಷದ ಹೆಣ್ಣು ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಸೋನು ಗೌಡ ಅವರನ್ನು ಮಾರ್ಚ್ 22 ರಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಸೋನು ಗೌಡರನ್ನು ವಶಕ್ಕೆ ಪಡೆದಿದ್ದರು.

ಸೋನು ಗೌಡ ಹಾಗೂ ಮಗು
ಸೋನು ಗೌಡ ಬಂಧನ ಪ್ರಕರಣ: ರಾಯಚೂರಿಗೆ ತೆರಳಿ ಬಾಲಕಿ ಮನೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು

ಬಳಿಕ ಆರೋಪಿ ಸೋನು ಗೌಡ ಅವರನ್ನು ನಾಲ್ಕು ದಿನದ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಂತರ ಸೋನು ಶ್ರೀನಿವಾಸ್ ಗೌಡಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು.

ಏಪ್ರಿಲ್​ 8ರ ತನಕ ಸೋನು ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ ಸೋನುಗೌಡ ಪರ ವಕೀಲರು ಜಾಮೀನು ಕೋರಿ ಕೋರ್ಟ್​ ಮೊರೆ ಹೋದ ಹಿನ್ನೆಲೆಯಲ್ಲಿ ಇಂದು ಜಾಮೀನು ಮಂಜೂರು ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com