ಸಾವು ಗೆದ್ದ ಸಾತ್ವಿಕ್: 20 ಗಂಟೆ ನಿರಂತರ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ

ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರ ಕರೆತರಲಾಗಲಾಗಿದೆ.
ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನ ರಕ್ಷಣೆ
ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನ ರಕ್ಷಣೆ

ವಿಜಯಪುರ: ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ಸುಮಾರು 16 ಅಡಿಯ ಕೊಳವೆ ಬಾವಿಗೆ ಬಿದ್ದಿದ್ದ. ನಿನ್ನೆ ಸಂಜೆಯಿಂದ ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದವು.

ಎರಡು ದಿನಗಳ ಹಿಂದೆ ಕೊರೆಸಿದ್ದ ತೆರೆದ ಕೊಳವೆಬಾವಿಗೆ ಬಿದ್ದು, ಮಗು ಜೀವನ್ಮರಣದ ನಡುವೆ ಹೋರಾಟ ನಡೆಸಿತ್ತು. ಸತೀಶ್ ಮತ್ತು ಪೂಜಾ ದಂಪತಿಯ ಪುತ್ರ ಸಾತ್ವಿಕ್ ಮುಜಗೊಂಡ ಬಾಲಕನು ಬುಧವಾರ ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದ. ಸಂಜೆ 5.30ರ ಸುಮಾರಿಗೆ ಆತ ಕೊಳವೆಬಾವಿಗೆ ಬಿದ್ದಿದ್ದ. ಸಂಜೆ 6 ಗಂಟೆಯಿಂದಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು.

ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನ ರಕ್ಷಣೆ
ವಿಜಯಪುರ borewell ಅವಘಡ: ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ, ರಕ್ಷಣೆಗೆ ಹರಸಾಹಸ, ಬಂಡೆ ಅಡ್ಡಿ!

ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಅಗ್ನಿ ಶಾಮಕ ಮತ್ತು ಪೊಲೀಸರು ಸತತವಾಗಿ ನಡೆಸಿದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ.‌ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಬಾಲಕ ಅಳುವುದು ಕೇಳಿಸಿತು. ಮಧ್ಯಾಹ್ನ 1.44ಕ್ಕೆ ಮಗುವನ್ನು ಜೀವಂತವಾಗಿ ಹೊರ ತೆಗೆಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ.

ಸಾತ್ವಿಕ್ ಬದುಕಿ ಬರಲಿ ಎಂದು ಗ್ರಾಮದಲ್ಲಿ ಹಾಗೂ ಸುತ್ತಮುತ್ತ ಜನ ದೇವಾಲಯಗಳಲ್ಲಿ ವಿಶೇಷ ಪೂಜೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದರು. ಲಚ್ಯಾಣ ಗ್ರಾಮದ ಸಿದ್ದಪ್ಪ ಮಹಾರಾಜರ ಗದ್ದುಗೆಗೆ ಗ್ರಾಮದ ಯುವಕರಿಂದ ವಿಶೇಷ ಪೂಜೆ ನಡೆದಿತ್ತು. ಬಾಲಕ ಬದುಕಿ ಬರಲಿ ಎಂದು ಪೂಜೆ ಸಲ್ಲಿಸಿ ಯುವಕರು ಪ್ರಾರ್ಥನೆ ಸಲ್ಲಿಸಿದ್ದರು. ಬಾಲಕನ ತಂದೆ-ತಾಯಿಯಂತೂ ರಾತ್ರಿಯಿಡೀ ಕೊಳವೆಬಾವಿ ಪಕ್ಕದಲ್ಲೇ ಇದ್ದು ದೇವರಲ್ಲಿ ಪ್ರಾರ್ಥನೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com