ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ತಮ್ಮ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಮಲ್ಲೇಶ್ವರಂನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಶುಕ್ರವಾರ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಬೆಂಗಳೂರು: ತಮ್ಮ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಮಲ್ಲೇಶ್ವರಂನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಶುಕ್ರವಾರ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕರ್ನಾಟಕದಲ್ಲಿ ಏಪ್ರಿಲ್ 26ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದರು.

ಶೋಭಾ ಕರಂದ್ಲಾಜೆ ಅವರು ಮಾಜಿ ಸಚಿವರಾದ ಬೈರತಿ ಬಸವರಾಜ್ ಮತ್ತು ಗೋಪಾಲಯ್ಯ ಜೊತೆ ರೋಡ್ ಶೋ ನಡೆಸಿದರು.

ಶೋಭಾ ಕರಂದ್ಲಾಜೆ
ಲೋಕಸಭೆ ಚುನಾವಣೆ: ಶೋಭಾ ಕರಂದ್ಲಾಜೆ, ಸುನೀಲ್ ಬೋಸ್, ಕೆ ಜಯಪ್ರಕಾಶ್ ಹೆಗ್ಡೆ ಸೇರಿ ಹಲವರು ನಾಮಪತ್ರ ಸಲ್ಲಿಕೆ

28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8ರವರೆಗೆ ಉಮೇದುವಾರಿಕೆಗಳನ್ನು ಹಿಂಪಡೆಯಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com