ಶ್ರವಣ ದೋಷದ ವಕೀಲೆ ಸಾರಾ ಸನ್ನಿ ವಾದ ಮಂಡನೆಗೆ ಅಸ್ತು: ಏಪ್ರಿಲ್ 8ರಂದು ವಿಶೇಷ ಕಲಾಪಕ್ಕೆ ಸಾಕ್ಷಿಯಾಗಲಿದೆ ಹೈಕೋರ್ಟ್‌

ಸರ್ವೋಚ್ಚ ನ್ಯಾಯಾಲಯದಲ್ಲಿ ದುಭಾಷಿಯ ನೆರವಿನಿಂದ ಸಂಕೇತ ಭಾಷೆ ಬಳಸಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಾದ ಮಂಡಿಸಿ ಇತಿಹಾಸ ಸೃಷ್ಟಿಸಿರುವ ಬೆಂಗಳೂರಿನ ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಇದೀಗ ಕರ್ನಾಟಕ ಹೈಕೋರ್ಟ್‌ನಲ್ಲೂ ವಾದ ಮಂಡಿಸಲು ಸಿದ್ಧರಾಗಿದ್ದಾರೆ.
ಸಾರಾ ಸನ್ನಿ
ಸಾರಾ ಸನ್ನಿ
Updated on

ಬೆಂಗಳೂರು: ಸರ್ವೋಚ್ಚ ನ್ಯಾಯಾಲಯದಲ್ಲಿ ದುಭಾಷಿಯ ನೆರವಿನಿಂದ ಸಂಕೇತ ಭಾಷೆ ಬಳಸಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಾದ ಮಂಡಿಸಿ ಇತಿಹಾಸ ಸೃಷ್ಟಿಸಿರುವ ಬೆಂಗಳೂರಿನ ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಇದೀಗ ಕರ್ನಾಟಕ ಹೈಕೋರ್ಟ್‌ನಲ್ಲೂ ವಾದ ಮಂಡಿಸಲು ಸಿದ್ಧರಾಗಿದ್ದಾರೆ.

ಕರ್ನಾಟಕ ಹೈಕೋರ್ಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ಇಂತಹದೊಂದು ವಿಶೇಷ ಕಲಾಪಕ್ಕೆ ಹೈಕೋರ್ಟ್‌ ಏಪ್ರಿಲ್‌ 8ರಂದು ಸಾಕ್ಷಿಯಾಗಲಿದೆ.

ಸ್ಕಾಟ್ಲೆಂಡ್‌ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ ಪತ್ನಿಯ ನಡುವಿನ ಕೌಟುಂಬಿಕ ವ್ಯಾಜ್ಯದ ಭಾಗವಾಗಿ ಪತಿಗೆ ಲುಕ್‌ ಔಟ್‌ ನೋಟಿಸ್ ಜಾರಿಗೊಳಿಸಲಾಗಿದೆ. ಇದನ್ನು ರದ್ದುಗೊಳಿಸಬೇಕು ಎಂದು ಕೋರಿ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತಾದ ಪ್ರಕರಣದಲ್ಲಿ ಪತ್ನಿಯ ಪರವಾಗಿ ಸಾರಾ ಸನ್ನಿ ವಾದ ಮಂಡಿಸಲು ಕೋರಿ ಗುರುವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರಕರಣದ ಪ್ರತಿವಾದಿಗಳಾದ ಕೇಂದ್ರದ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅರವಿಂದ ಕಾಮತ್‌ ಮತ್ತು ಉಪ ಸಾಲಿಸಿಟರ್‌ ಜನರಲ್ ಎಚ್ ಶಾಂತಿಭೂಷಣ್‌ ಒಪ್ಪಿಗೆ ಸೂಚಿಸಿದರು.

ಸಾರಾ ಸನ್ನಿ
BBMP ಕಚೇರಿಯಲ್ಲಿ ಶಾಸಕ ಪ್ರಿಯಕೃಷ್ಣ, ಎಂ ಕೃಷ್ಣಪ್ಪ ಫೋಟೋ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

ಇದನ್ನು ದಾಖಲಿಸಿಕೊಂಡ ಪೀಠವು ಸಾರಾ ಸನ್ನಿ ಅವರಿಗೆ ದುಭಾಷಿ ನೆರವು ನೀಡಲು ವ್ಯವಸ್ಥೆ ಕಲ್ಪಿಸಿ ಎಂದು ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌ ಅವರಿಗೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್‌ 8ಕ್ಕೆ ನಿಗದಿಗೊಳಿಸಿದೆ.

ಮುಂಬೈನ ಥಾಣೆ ಜಿಲ್ಲೆಯ ಪತಿ 2004ರಲ್ಲಿ ಉನ್ನತ ಶಿಕ್ಷಣಕ್ಕಾಗಿ ಸ್ಕಾಟ್ಲೆಂಡ್‌ಗೆ ತೆರಳಿದ್ದರು. ಸದ್ಯ ಅವರು ಅಲ್ಲಿಯೇ ಬ್ಯಾಂಕ್‌ ಅಧಿಕಾರಿಯಾಗಿದ್ದು ಬ್ರಿಟಿಷ್‌ ಪೌರತ್ವ ಪಡೆದಿದ್ದಾರೆ. ಅವರಿಗೆ ಈಗ 41 ವರ್ಷ. ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿದ್ದ ಅವರು ಆನ್‌ಲೈನ್ ತಾಣದ ಮೂಲಕ ಬೆಂಗಳೂರಿನ 36 ವರ್ಷದ ಮಹಿಳೆಯನ್ನು 2023ರ ಮೇ 21ರಂದು ವಿವಾಹವಾಗಿದ್ದರು.

ಸಾರಾ ಸನ್ನಿ
ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಇದೇ ಮೊದಲು, ಬೆಂಗಳೂರು ಮೂಲದ ಮೂಕ ವಕೀಲೆ ವಾದ!

ಮದುವೆ ರಾತ್ರಿ ಎರಡೂ ಕುಟುಂಬದ ಸದಸ್ಯರು ಔತಣ ಕೂಟದಲ್ಲಿ ಪಾಲ್ಗೊಂಡಿದ್ದರು. ಅಂದು ನನ್ನ ಪತಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಅವರ ಮೊಬೈಲ್‌ ಫೋನ್‌ಗೆ ಬಂದ ಸಂದೇಶವೊಂದನ್ನು ನಾನು ಗಮನಿಸಿದೆ. ಮಹಿಳೆಯೊಬ್ಬರು ಕಳುಹಿಸಿದ್ದ ಆ ಸಂದೇಶವನ್ನು ಓದಿದೆ ಮತ್ತು ಕುತೂಹಲದಿಂದ ಆಕೆಯ ಹಿಂದಿನ ಸಂದೇಶಗಳನ್ನೂ ಓದಿ ಆತಂಕಕ್ಕೆ ಒಳಗಾದೆ. ಕಾರಣ, ಆ ಮಹಿಳೆಯ ಜೊತೆ ನನ್ನ ಪತಿ ಅತ್ಯಂತ ಪ್ರೀತಿ ಮತ್ತು ಲೈಂಗಿಕ ಸಲುಗೆಯನ್ನು ಒಳಗೊಂಡಿರುವುದು ನನ್ನ ಅರಿವಿಗೆ ಬಂದಿತು ಎಂದು ಪತ್ನಿ ದೂರಿದ್ದಾರೆ.

ವರದಕ್ಷಿಣೆಗಾಗಿ ಸತಾಯಿಸಿದ್ದಾರೆ ಎಂದು ಆರೋಪಿಸಿ ಪತ್ನಿ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ಪತಿ, ಅವರ ತಂದೆ, ತಾಯಿ, ಅವರ ತಂಗಿ ಹಾಗೂ ಆಕೆಯ ಗಂಡನ ವಿರುದ್ಧ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ಐಪಿಸಿ ಮತ್ತು ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡ ಬಸವನಗುಡಿ ಠಾಣೆ ಪೊಲೀಸರು ಪತಿಯ ವಿರುದ್ಧ ಲುಕ್‌ ಔಟ್‌ ನೋಟಿಸ್ ಜಾರಿಗೊಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com