Rameshwaram Cafe Blast: NIA ಯಿಂದ BJP ಕಾರ್ಯಕರ್ತನ ವಿಚಾರಣೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಬಿಜೆಪಿ ಕಾರ್ಯಕರ್ತನೋರ್ವನನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದುಬಂದಿದೆ.
ರಾಮೇಶ್ವರಂ ಕೆಫೆ
ರಾಮೇಶ್ವರಂ ಕೆಫೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಬಿಜೆಪಿ ಕಾರ್ಯಕರ್ತನೋರ್ವನನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ ಎಂಬುವವರನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದ್ದು, ವಿಚಾರಣೆಗೊಳಪಡಿಸಿದೆ ಎನ್ನಲಾಗಿದೆ.

ರಾಮೇಶ್ವರಂ ಕೆಫೆ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ ಪತ್ತೆ!

ಬಿಜೆಪಿ ‌ಕಾರ್ಯಕರ್ತ ಸಾಯಿ ಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದು, ರಹಸ್ಯ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ ಎಂದು ಹೇಳಲಾಗಿದೆ.

ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಾಮೇಶ್ವರಂ ಕೆಫೆ
ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್, ಉಗ್ರ ಮತೀನ್ ಫೋಟೋ ಬಿಡುಗಡೆ: ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ!

ಮಾರ್ಚ್ 1ರಂದು ವೈಟ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಐಇಡಿ ಸ್ಫೋಟದಲ್ಲಿ ಕನಿಷ್ಠ 9 ಮಂದಿ ಗಾಯಗೊಂಡಿದ್ದರು. ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಎನ್‌ಐಎ ಈ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com